ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ ನಿಷಿದ್ಧ‘

Published 27 ಏಪ್ರಿಲ್ 2023, 5:04 IST
Last Updated 27 ಏಪ್ರಿಲ್ 2023, 5:04 IST
ಅಕ್ಷರ ಗಾತ್ರ

ರಾಮನಗರ: ‘ಚುನಾವಣೆ ಪ್ರಚಾರ ಕಾರ್ಯಕ್ಕೆ 18 ವರ್ಷದ ಒಳಗಿನ ಮಕ್ಕಳನ್ನು ಬಳಸಿಕೊಳ್ಳುವುದು ನಿಷಿದ್ಧ. ಅಂತಹವರ ವಿರುದ್ಧ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗುವುದು‘ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್ಚರಿಸಿದ್ದಾರೆ.

ರಾಜಕೀಯ ಪಕ್ಷಗಳ ಮೆರವಣಿಗೆ, ಸಾರ್ವಜನಿಕ ಭಾಷಣ, ಮನೆ-ಮನೆಗೆ ಭೇಟಿ ನೀಡುವುದು ಪಕ್ಷದ ಚಿಹ್ನೆಯಿರುವ ಬುಕ್ ಮತ್ತು ಬಟ್ಟೆಗಳನ್ನು ಹಂಚುವುದು, ಕರಪತ್ರಗಳನ್ನು ಹಂಚುವುದು ಮುಂತಾದ ಚಟುವಟಿಕೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಂಡಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT