ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾಭಿಮಾನದ ಪ್ರತೀಕವಾದ ಸಂವಿಧಾನಕ್ಕೆ ಧಕ್ಕೆಯಾಗಬಾರದು: ಯು.ಟಿ. ಖಾದರ್

Published 21 ಸೆಪ್ಟೆಂಬರ್ 2023, 11:09 IST
Last Updated 21 ಸೆಪ್ಟೆಂಬರ್ 2023, 11:09 IST
ಅಕ್ಷರ ಗಾತ್ರ

ರಾಮನಗರ: ‘ದೇಶದ ಸಂವಿಧಾನ ಅತ್ಯಂತ ಪವಿತ್ರವಾದುದು. ಪ್ರತಿಯೊಬ್ಬರು ಅದನ್ನು ಗೌರವಿಸಬೇಕು. ಸ್ವಾಭಿಮಾನದ ಪ್ರತೀಕವಾದ ಸಂವಿಧಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು’ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.

ತಾಲ್ಲೂಕಿನ ಬಿಳಗುಂಬ ಗ್ರಾಮಕ್ಕೆ ಗುರುವಾರ ಖಾಸಗಿ ಭೇಟಿ ನೀಡಿದ್ದ ಸಂದರ್ಭದಲ್ಲಿ, ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸಂವಿಧಾನದ ಪೀಠಿಕೆ ಬದಲಾವಣೆ ಕುರಿತು ನನ್ನ ಗಮನಕ್ಕೆ ಬಂದಿಲ್ಲ. ಆ ಕುರಿತು ಯಾವುದೇ ಲಿಖಿತ ಮಾಹಿತಿಯೂ ಬಂದಿಲ್ಲ’ ಎಂದರು.

ಹಿತಾಸಕ್ಕಿಗೆ ಧಕ್ಕೆಯಾಗದಿರಲಿ

‘ಕಾವೇರಿ ನದಿ ನೀರು ವಿಷಯದಲ್ಲಿ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ನಡೆಸಬೇಕಾದ ಹೋರಾಟದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಮುನ್ನಡೆಯುತ್ತಿವೆ. ನೀರಿಗೆ ಸಂಬಂಧಿಸಿದ ವಿಷಯಗಳನ್ನು ಸರ್ಕಾರ ಗಣನೆಗೆ ತೆಗೆದುಕೊಂಡು ರೈತರ ಹಿತ ಕಾಯಲಿದೆ’ ಎಂದು ಮತ್ತೊಂದು ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT