ಶನಿವಾರ, ಏಪ್ರಿಲ್ 1, 2023
30 °C

ಜಾನುವಾರುಗಳಿಗೆ ಲಸಿಕೆ ಕಡ್ಡಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ‘ಜಾನುವಾರುಗಳಿಗೆ ತಗಲುತ್ತಿರುವ ಕಾಲುಬಾಯಿ ಜ್ವರವನ್ನು ತಡೆಗಟ್ಟಲು ಸರ್ಕಾರದಿಂದ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ. ರೈತರು ತಪ್ಪದೆ ರಾಸುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು’ ಎಂದು ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಯು.ಸಿ. ಕುಮಾರ್‌ ತಿಳಿಸಿದರು.

ತಾಲ್ಲೂಕಿನ ಬರಡನಹಳ್ಳಿಯಲ್ಲಿ ಸೋಮವಾರ ಎರಡನೇ ಸುತ್ತಿನ ಕಾಲುಬಾಯಿ ಜ್ವರದ ವಿರುದ್ಧ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರೈತರು ಹಾಲು ಕರೆಯುತ್ತಿರುವ ರಾಸುಗಳಿಗೆ ಲಸಿಕೆ ಹಾಕಿಸಿದರೆ ಹಾಲು ಕಡಿಮೆ ಆಗುತ್ತದೆ ಎಂಬ ಕಾರಣದಿಂದ ಲಸಿಕೆ ಹಾಕಿಸದೆ ಸುಮ್ಮನಾಗುತ್ತಾರೆ. ಒಂದು ರಾಸು ಲಸಿಕೆಯಿಂದ ತಪ್ಪಿಸಿಕೊಂಡರೆ ಅದಕ್ಕೆ ಕಾಲುಬಾಯಿ ಜ್ವರ ಬಂದು ಬೇರೆ ರಾಸುಗಳಿಗೆ ಹರಡುತ್ತದೆ. ಅದಕ್ಕಾಗಿ ಪೂರ್ಣ ಪ್ರಮಾಣದಲ್ಲಿ ರೋಗ ತಡೆಗಟ್ಟಲು ಕಡ್ಡಾಯವಾಗಿ ಎಲ್ಲಾ ರಾಸುಗಳಿಗೆ ಲಸಿಕೆ ಹಾಕಿಸಬೇಕು ಎಂದರು.

ತಾಲ್ಲೂಕಿನಲ್ಲಿ 1.8 ಲಕ್ಷ ಜಾನುವಾರುಗಳಿವೆ. ಒಂದು ತಿಂಗಳ ಕಾಲ ಲಸಿಕೆ ಅಭಿಯಾನ ಕಾರ್ಯಕ್ರಮ ನಡೆಯುತ್ತದೆ ಎಂದು ಹೇಳಿದರು.

ಚಾಕನಹಳ್ಳಿ ಪಶು ಆಸ್ಪತ್ರೆ ವೈದ್ಯೆ ಡಾ.ಪಂಕಜಾ, ಗ್ರಾಮ ಪಂಚಾಯಿತಿ ಸದಸ್ಯ ಸುಮಂತ್‌ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.