ಸೋಮವಾರ, ಜನವರಿ 20, 2020
26 °C

ಚಿಕ್ಕಮುದುವಾಡಿ: 6ರಂದು ವೈಕುಂಠ ಏಕಾದಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನಕಪುರ: ಇಲ್ಲಿನ ಕಸಬಾ ಹೋಬಳಿ ಚಿಕ್ಕಮುದುವಾಡಿ ಗ್ರಾಮದಲ್ಲಿರುವ ಶ್ರೀ ಸಿಂಹಾಚಲ ಕ್ಷೇತ್ರದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಮಹೋತ್ಸವವು ಜ.6 ರಂದು ನಡೆಯಲಿದೆ.

ಸೋಮವಾರ ಬೆಳಿಗ್ಗೆ ಶ್ರೀ ಮಹಾಲಕ್ಷ್ಮೀ ಸಮೇತ ಸ್ವಾಮಿಗೆ ಸುಪ್ರಭಾತ ಸೇವೆ, ಮಂಗಳವಾದ್ಯ ಸಮೇತ ವೇದ ಘೋಷ, ಸ್ವಾಮಿಗೆ ಪುಷ್ಪಾಲಂಕಾರ, ಮಹಾ ಮಂಗಳಾರತಿ, ವೈಕುಂಠ ಮಹಾದ್ವಾರ ಪ್ರವೇಶ, ತೀರ್ಥ ಪ್ರಸಾದ ವಿನಿಯೋಗ ನೆರವೇರಲಿದೆ.

ತಾಲ್ಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಬಂದು ಸ್ವಾಮಿಯ ದರ್ಶನ ಪಡೆದು ತೀರ್ಥ ಪ್ರಸಾದವನ್ನು ಸ್ವೀಕರಿಸಬೇಕೆಂದು ಚಿಕ್ಕಮುದುವಾಡಿ ಹಾಗೂ ಸುತ್ತಲಿನ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು