ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಕುಂಠ ಏಕಾದಶಿ: ಸರಳ ಆಚರಣೆ

Last Updated 14 ಜನವರಿ 2022, 7:48 IST
ಅಕ್ಷರ ಗಾತ್ರ

ರಾಮನಗರ: ಕೋವಿಡ್ ಸೋಂಕಿನ ಭೀತಿ ನಡುವೆ ಜಿಲ್ಲೆಯಾದ್ಯಂತ ವೈಕುಂಠ ಏಕಾದಶಿಯನ್ನು ಸರಳವಾಗಿ ಆಚರಿಸಲಾಯಿತು.

ಜಿಲ್ಲೆಯ ವಿವಿಧ ದೇವಾಲಯದಲ್ಲಿ ಕೋವಿಡ್ ನಿಯಮಾವಳಿ ಅನುಸರಿಸಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ರಾಮನಗರದಲ್ಲಿ ಮೇಕೆದಾಟು ಪಾದಯಾತ್ರೆ ಗದ್ದಲದ ನಡುವೆಯೂ ಭಕ್ತರು ದೇಗುಲಗಳಿಗೆ ಭೇಟಿ
ಕೊಟ್ಟರು.

ವೈಕುಂಠ ಬಾಗಿಲಿನ ಅಲಂಕಾರ ಗಮನ ಸೆಳೆಯಿತು. ಪತ್ನಿ ಸಮೇತರಾಗಿದ್ದ ವಿಷ್ಣುವಿನ ಮೂರ್ತಿಯನ್ನು ದ್ವಾರಕ್ಕೆ ಕಟ್ಟಲಾಗಿತ್ತು. ಭಕ್ತರು ಈ ದ್ವಾರದ ಮೂಲಕವೇ ದೇಗುಲ ಪ್ರವೇಶ ಮಾಡಿದರು. ರಾಮನಗರದ ಕೆಂಪೇಗೌಡ ವೃತ್ತದಲ್ಲಿರುವ ವೆಂಕಟೇಶ್ವರ ದೇಗುಲದಲ್ಲಿ ದೇವರಿಗೆ ಮಾಡಿದ್ದ ವಿಶೇಷ ಅಲಂಕಾರ ಗಮನ ಸೆಳೆಯಿತು.

ರಾಮನಗರ ತಾಲ್ಲೂಕಿನ ಕೂಟಗಲ್‌ ತಿಮ್ಮಪ್ಪನ ದೇಗುಲದಲ್ಲಿ ದೇವರ ಮೂರ್ತಿಗೆ ವಿಶೇಷ ಅಲಂಕಾರ ಮಾಡಿದ್ದು, ಬೆಳಿಗ್ಗೆಯಿಂದಲೇ ಭಕ್ತರು ಭೇಟಿ ನೀಡಿ ದರ್ಶನ ಪಡೆದರು. ತಿಮ್ಮಪ್ಪಸ್ವಾಮಿ ಟ್ರಸ್ಟ್ ವತಿಯಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಕೋವಿಡ್ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಕನಕಪುರ ತಾಲೂಕಿನ ಕಲ್ಲಹಳ್ಳಿ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ಕೆಲವು ಪ್ರಸಿದ್ಧ ದೇವಾಲಯಲ್ಲಿ ಭಕ್ತರ ಪ್ರವೇಶಕ್ಕೆ ನಿಷೇಧವಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT