ರಾಮನಗರ: ಸರ್ಕಾರದ ನಿರ್ಲಕ್ಷ್ಯದಿಂದಾಗಿ ರಾಜ್ಯದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಜೀವ ವಿರೋಧಿ ಧೋರಣೆ ವಿರುದ್ಧ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜು ಒತ್ತಾಯಿಸಿದರು.

ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ನಗರದ ಐಜೂರು ವೃತ್ತದಲ್ಲಿ ಶನಿವಾರ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದ ಸಂದರ್ಭ ಅವರು ಮಾತನಾಡಿದರು. ಕೋವಿಡ್ ಪರಿಸ್ಥಿತಿ ನಿಯಂತ್ರಿಸುವಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿಯೂ ಸೋತಿದೆ ಎಂದು ಅವರು ದೂರಿದರು.

ಮುಖ್ಯಮಂತ್ರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಮಂತ್ರಿಗಳು, ಪೊಲೀಸರು ಹಾಗೂ ಕೊರೋನಾ ವಾರಿಯರ್ಸ್ ಗಳಿಗೂ ಕೊರೋನಾ ಸೋಂಕು ತಗುಲಿದೆ. ಸರ್ಕಾರದ ಆಡಳಿತ ಯಂತ್ರ ವಿಧಾನಸೌಧದಿಂದ ಮಣಿಪಾಲ್ ಆಸ್ಪತ್ರೆಗೆ ರವಾನೆಯಾಗಿದೆ. ಕೊರೊನಾ ಸಂಕಷ್ಟದ ಈ ಸಮಯದಲ್ಲಿ ಸರ್ಕಾರಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಒಂದಿಬ್ಬರು ಸಚಿವರನ್ನು ಹೊರತುಪಡಿಸಿದರೆ, ಇನ್ನುಳಿದರೆಲ್ಲರೂ ಅದಕ್ಷರಾಗಿದ್ದಾರೆ. ಹೀಗಾಗಿ ಸಂಪುಟ ಪುನರ್ ರಚನೆ ಮಾಡಬೇಕು ಎಂದು ಒತ್ತಾಯಿಸಿದರು.

‘ಕೊರೊನಾ ಸಂಕಷ್ಟದ ಸಮಯದಲ್ಲಿ ಎಲ್ಲ ಸಚಿವರೂ ಆರೋಗ್ಯ ಸಚಿವರಾಗಿಬಿಟ್ಟಿದ್ದಾರೆ. ಆರೋಗ್ಯ ಖಾತೆ ನಿರ್ವಹಿಸುತ್ತಿರುವ ಸಚಿವರು ತಣ್ಣಗಿದ್ದಾರೆ. ಎಸ್.ಸುರೇಶ್ ಕುಮಾರ್, ಆರ್.ಅಶೋಕ ಹಾಗೂ ಇನ್ನಿತರೆ ಮಂತ್ರಿಗಳು ಕೊರೊನಾ ಅಂಕಿ-ಅಂಶಗಳ ಬಗ್ಗೆ ಮಾಹಿತಿ ನೀಡುತ್ತಾರೆ. ಆದರೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷ ಎಂ.ಜಗದೀಶ್, ಮುಖಂಡರಾದ ಸಿ.ಎಸ್.ಜಯಕುಮಾರ್, ಗಾಯತ್ರಿಬಾಯಿ, ಪಾರ್ಥಸಾರಥಿ ಮತ್ತಿತರರು ಇದ್ದರು.

ದುಃಖದ ನಡುವೆಯೂ ಭಾಗಿ
ಪತ್ನಿ ಅಗಲಿಕೆಯ ದುಃಖದ ನಡುವೆಯೂ ವಾಟಾಳ್ ನಾಗರಾಜು ಪ್ರತಿಭಟನೆಯಲ್ಲಿ ಭಾಗಿಯಾದರು. ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳಿಗೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸುವ ಮೂಲಕ ಕಾಳಜಿ ತೋರಿದರು. ವಾಟಾಳ್ ಪತ್ನಿ ಜ್ಞಾನಾಂಬಿಕಾ ಕಳೆದ ಮೂರು ದಿನದ ಹಿಂದಷ್ಟೇ ಅನಾರೋಗ್ಯದಿಂಧ ನಿಧನರಾಗಿದ್ದು, ಮೈಸೂರಿನ ಹದಿನಾರು ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆದಿತ್ತು.

ಸರ್ಕಾರದ ಬೇಜವಾಬ್ದಾರಿತನದಿಂದ ಚಿಕಿತ್ಸೆ ಸಿಗದೇ 3 ಸಾವಿರ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಕುಟುಂಬದವರಿಗೆ ತಲಾ 5 ಲಕ್ಷ ಪರಿಹಾರ ನೀಡಬೇಕು.
-ವಾಟಾಳ್ ನಾಗರಾಜು,ಕನ್ನಡಪರ ಹೋರಾಟಗಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.