ಸೋಮವಾರ, ಜೂನ್ 21, 2021
30 °C

ಸರ್ಕಾರದ ವಿರುದ್ಧ ವಾಟಾಳ್‌ ನಾಗರಾಜು ವಾಗ್ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಕೊರೊನಾ ಹೆಸರಿನಲ್ಲಿ ರಾಜ್ಯ ಸರ್ಕಾರ ಹಣ ಲೂಟಿ ಮಾಡುತ್ತಿದೆ ಎಂದು ಆರೋಪಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಮಾಧ್ಯಮದವರ ಜೊತೆ ಮಾತನಾಡಿದ ವಾಟಾಳ್‌ 'ರಾಜ್ಯದ ಜನತೆ ಕೊರೊನಾ ಹಾಗೂ ಪ್ರವಾಹದಿಂದ ನಲುಗುತ್ತಿದ್ದರೆ, ಬಿಜೆಪಿ ಸರ್ಕಾರ ಮಾತ್ರ ಲೂಟಿಗೆ ನಿಂತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. 'ಈ ಬಾರಿಯ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌ‘ದಲ್ಲಿಯೇ ನಡೆಸಬೇಕು. ಅಲ್ಲಿ ಎಲ್ಲ ಸಮಸ್ಯೆಗಳ ಕುರಿತು ಚರ್ಚೆ ಆಗಬೇಕು. ಡಾ.ಸರೋಜಿನಿ ಮಹಿಷಿ ವರದಿ ಅನುಸಾರ ಸರ್ಕಾರಿ ಹಾಗೂ ಖಾಸಗಿ ಉದ್ಯೋಗದಲ್ಲಿ ಕನ್ನಡಿಗರಿಗೇ ಆದ್ಯತೆ ಸಿಗಬೇಕು’ ಎಂದು ಒತ್ತಾಯಿಸಿದರು.

'ಉತ್ತರ ಕರ್ನಾಟಕದ ಜನತೆ ಈ ವರ್ಷವೂ ಪ್ರವಾಹದಿಂದ ನಲುಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇನ್ನಾದರೂ ರಾಜ್ಯದ ನೆರವಿಗೆ ಧಾವಿಸಬೇಕು. ಶೀಘ್ರವೇ ವೈಮಾನಿಕ ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ಸೂಕ್ತ ನೆರವು ನೀಡಬೇಕು. ಇದಕ್ಕೆ ಒತ್ತಾಯಿಸಿ ಮುಂದಿನ ವಾರ ಹುಬ್ಬಳಿಯಲ್ಲಿ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ’ ಎಂದು ತಿಳಿಸಿದರು.

ಮುಖಂಡರಾದ ಎಂ.ಜಗದೀಶ್, ಗಾಯತ್ರಿ ಬಾಯಿ, ಸಿ.ಎಸ್. ಜಯಕುಮಾರ್, ಜಯರಾಮು, ಚಂದ್ರಶೇಖರ್, ಲೀಲಾವತಿ, ಮರಿಸ್ವಾಮಿ, ಎನ್.ಲತಾ, ಪಾರ್ಥ ಸಾರಥಿ, ಬಾಲಾಜಿ ಕಷ್ಣಮೂರ್ತಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು