ರಾಮನಗರ: ರಾಜ್ಯ ಸರ್ಕಾರ ಕನ್ನಡ ಮಾಧ್ಯಮದ ಶಾಲೆಗಳನ್ನು ಕಡೆಗಣಿಸುವ ಮೂಲಕ ಅವುಗಳನ್ನು ಮುಚ್ಚಲು ಮುಂದಾಗಿದೆ ಎಂದು ಆರೋಪಿಸಿ, ಕನ್ನಡ ವಾಟಾಳ್ ಪಕ್ಷ ಮತ್ತು ಕರುನಾಡು ಸೇನೆ ಸಂಘಟನೆ ಕಾರ್ಯಕರ್ತರು, ‘ಕನ್ನಡ ಶಾಲೆಗಳನ್ನು ಉಳಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಜಿಕೆಎಂಎಸ್ ಸರ್ಕಾರಿ ಶಾಲೆ ಮುಂಭಾಗ ಜಮಾಯಿಸಿದ ಪದಾಧಿಕಾರಿಗಳು, ಕನ್ನಡ ಶಾಲೆಗಳ ಸಬಲೀಕರಣಕ್ಕೆ ನಿರ್ಲಕ್ಷ್ಯ ವಹಿಸಿರುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕನ್ನಡ ಶಾಲೆಗಳನ್ನು ಮುಚ್ಚಬಾರದು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಕರುನಾಡು ಸೇನೆ ರಾಜ್ಯ ಉಪಾಧ್ಯಕ್ಷ ಐಜೂರು ಎಂ. ಜಗದೀಶ್, ‘ಕನ್ನಡ ಮಾಧ್ಯಮದ ಶಾಲೆಗಳನ್ನು ಮುಚ್ಚುತ್ತಿರುವುದನ್ನು ವಿರೋಧಿಸಿ ಕನ್ನಡ ಹೋರಾಟಗಾರ ಹಾಗೂ ವಾಟಾಳ್ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾದ ವಾಟಾಳ್ ನಾಗರಾಜ್ ಅವರು ಬಂದ್ಗೆ ಕರೆ ನೀಡಿದ್ದಾರೆ. ಅವರಿಗೆ ಬೆಂಬಲ ವ್ಯಕ್ತಪಡಿಸಿ ರಾಮನಗರದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ’ ಎಂದರು.

‘ರಾಜ್ಯದ ಬೀದರ್ನಿಂದ ಚಾಮರಾಜನಗರದವರೆಗೆ ಬಂದ್ಗೆ ಕರೆ ಕೊಟ್ಟಿದ್ದು, ಎಲ್ಲಾ ಕಡೆ ಪ್ರತಿಭಟನೆ ನಡೆಸಲಾಗಿದೆ. ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿದಿದೆ. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಖಾಸಗಿ ಶಾಲೆಗಳಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಸರ್ಕಾರ ಕನ್ನಡ ಶಾಲೆಗಳನ್ನು ಮುಚ್ಚಲು ಹೊರಟಿದೆ. ಕನ್ನಡ ಭಾಷೆಗೆ 2500 ವರ್ಷಗಳ ಇತಿಹಾಸವಿದೆ. 8 ಜ್ಞಾನಪೀಠ ಪ್ರಶಸ್ತಿಗಳು ಬಂದಿವೆ. ಆದರೂ, ಕನ್ನಡ ಶಾಲೆಗಳಿಗೆ ಈ ಗತಿ ಬಂದಿರುವುದು ದುರಂತ’ ಎಂದು ಹೇಳಿದರು.

‘ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಬಹುತೇಕರು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಇಂದು ಉನ್ನತ ಸ್ಥಾನಮಾನ ಪಡೆದಿದ್ದಾರೆ. ಆದರೂ, ಸರ್ಕಾರಿ ಶಾಲೆಗಳನ್ನು ಉಳಿಸುವ ಬಗ್ಗೆ ಕಾಳಜಿ ತೋರುತ್ತಿಲ್ಲ. ಇನ್ನಾದರೂ ಕನ್ನಡ ಶಾಳೆಗಳನ್ನು ಉಳಿಸಿ ಬೆಳೆಸಲು ಮುಂದಾಗಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಮ್ಮ ಹೋರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಕರುನಾಡು ಸೇನೆ ರಾಜ್ಯ ಉಸ್ತುವಾರಿ ಅಧ್ಯಕ್ಷ ಗಂಗಾಧರ್ ವಿ.ಎನ್, ಜಿಲ್ಲಾಧ್ಯಕ್ಷ ಸಿ.ಎಸ್. ಜಯಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಲಕ್ಷ್ಮಿ, ತಾಲೂಕು ಮಹಿಳಾ ಅಧ್ಯಕ್ಷೆ ಭಾಗ್ಯ ಸುಧಾ, ಜಿಲ್ಲಾ ದಲಿತ ಘಟಕದ ಅಧ್ಯಕ್ಷ ಕೆ. ಜಯರಾಮು, ವಿಜಯ್ ಕುಮಾರ್, ತಾಲ್ಲೂಕು ಉಪಾಧ್ಯಕ್ಷ ಕುಮಾರ್, ಕಾರ್ಯಾಧ್ಯಕ್ಷ ಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಕುಮಾರ್, ಪದಾಧಿಕಾರಿಗಳಾದ ಪುಷ್ಪಲತಾ, ನಾಗವೇಣಿ, ವೆಂಕಟಲಕ್ಷ್ಮಿ, ಕೀರ್ತಿರಾಜ್ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.