ಕನಕಪುರ: ಮನುಷ್ಯ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದಾಗ ಆತನ ಮನಸ್ಸು, ಭಾವನೆ, ಮಾತು ಪವಿತ್ರವಾಗುತ್ತದೆ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು.

ಕಸಬಾ ಹೋಬಳಿ ಆಡನಕುಪ್ಪೆ ಗ್ರಾಮದಲ್ಲಿ ಭಾನುವಾರ ನಡೆದ ವೀರಭದ್ರಸ್ವಾಮಿ ದೇವಾಲಯದ ನೂತನ ರಾಜಗೋಪುರ ಉದ್ಘಾಟನೆ ಮತ್ತು ಕಳಸ ಸ್ಥಾಪನಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಆಧುನಿಕ ಕಾಲದಲ್ಲಿ ಮನುಷ್ಯನ ಬಳಿ ಎಲ್ಲವೂ ಇದ್ದರೂ ಶಾಂತಿ ಮತ್ತು ನೆಮ್ಮದಿ ಇಲ್ಲದಂತಾಗಿದೆ. ಹಿಂದಿನ ಕಾಲದಲ್ಲಿ ಸೌಲಭ್ಯ ಇರಲಿಲ್ಲವಾದರೂ ಪೂರ್ವಿಕರು ನೆಮ್ಮದಿಯಿಂದ ಇದ್ದರು. ಇಂದು ಎಲ್ಲವೂ ಇದ್ದರೂ ನೆಮ್ಮದಿಗಾಗಿ ಹುಡುಕಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ನೆಮ್ಮದಿ, ಸಂತೋಷ ಮತ್ತು ತೃಪ್ತಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಆಸೆಯೇ ದುಃಖಕ್ಕೆ ಮೂಲವಾಗಿದೆ. ನಿರಾಸೆ ಭಾವನೆ ಮೂಡಿದಾಗ ದುಃಖ ಕಡಿಮೆಯಾಗಿ ನಿಜವಾದ ನೆಮ್ಮದಿ ಲಭಿಸುತ್ತದೆ ಎಂದು ಸ್ವಾಮೀಜಿ ತಿಳಿಸಿದರು.

12ನೇ ಶತಮಾನದಲ್ಲಿ ಬಸವಾದಿ ಶರಣರು ಜೀವನ ಮೌಲ್ಯಗಳನ್ನು ಬೋಧಿಸಿದ್ದರು. ಆಯ್ದಕ್ಕಿ ಲಕ್ಕಮ್ಮನಂತಹ ತಾಯಿ ಇದ್ದ ಮನೆಯಲ್ಲಿ ನೆಮ್ಮದಿ ನೆಲೆಸಿರುತ್ತದೆ. ಕಾನೂನುಗಳಿಂದ ಭ್ರಷ್ಟಾಚಾರ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ. ಪ್ರತಿ ಮನೆಯಲ್ಲೂ ಸಂಸ್ಕಾರವಂತ ತಾಯಿ ಇದ್ದರೆ ಸಮಾಜ ಭ್ರಷ್ಟಾಚಾರ ಮುಕ್ತವಾಗುತ್ತದೆ ಎಂಬ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಮಾತು ಸ್ಮರಿಸಬೇಕು ಎಂದು ಹೇಳಿದರು.

ಜೀವನದಲ್ಲಿ ಆಸೆಗಳ ಬೆನ್ನು ಹತ್ತಿ ದುಃಖ ಮತ್ತು ಸಂಕಷ್ಟ ಎದುರಿಸುವ ಪ್ರವೃತ್ತಿ ಹೆಚ್ಚುತ್ತಿದೆ. ನಮಗಿಂತ ಶ್ರೀಮಂತರನ್ನು ನೋಡಿ ಬದುಕದೆ, ನಮಗಿಂತ ಕಡಿಮೆ ಸೌಲಭ್ಯ ಇರುವವರನ್ನು ನೋಡಿ ಅವರಿಗಿಂತ ನೆಮ್ಮದಿಯಾಗಿದ್ದೇವೆ ಎಂಬ ಭಾವನೆಯಿಂದ ಬದುಕಬೇಕು. ಗ್ರಾಮೀಣ ಭಾಗದಲ್ಲಿ ಇದ್ದ ಇಂತಹ ಸಂಸ್ಕೃತಿ ಕ್ರಮೇಣ ಕ್ಷೀಣಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಮರಳೆ ಗವಿಮಠದ ಮುಮ್ಮಡಿ ಶಿವರುದ್ರ ಸ್ವಾಮೀಜಿ, ಗುರು ಮತ್ತು ದೇವರ ಸಾನ್ನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸುವುದರಿಂದ ಮನುಷ್ಯನಿಗೆ ಶಾಂತಿ ಮತ್ತು ನೆಮ್ಮದಿ ಸಿಗುತ್ತದೆ. ಪರಶಿವಯ್ಯನವರ ಕುಟುಂಬ ಮತ್ತು ಭಕ್ತಾದಿಗಳ ಸಹಕಾರದಿಂದ ದೇವಾಲಯ ಅಭಿವೃದ್ಧಿ ಹೊಂದಿದೆ ಎಂದರು.

ಮಲೆ ಮಹದೇಶ್ವರ ಬೆಟ್ಟದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಕನಕಪುರ ಭಾಗದ ಮಠಗಳು ಜನರ ಅಭಿವೃದ್ಧಿಗೆ ಶ್ರಮಿಸುತ್ತಿವೆ. ಈ ಭಾಗದ ಜನರಿಗೆ ಮಠಗಳ ಮೇಲೆ ಅಪಾರ ಭಕ್ತಿ ಮತ್ತು ಹೃದಯ ಶ್ರೀಮಂತಿಕೆ ಇದೆ. ಅಂತಹ ಭಕ್ತರಿಂದಲೇ ಧಾರ್ಮಿಕ ಕೇಂದ್ರಗಳು ಅಭಿವೃದ್ಧಿಯಾಗುತ್ತಿವೆ ಎಂದು ಹೇಳಿದರು.

ದೇಗುಲ ಮಠದ ಕಿರಿಯಶ್ರೀ ಚನ್ನಬಸವ ಸ್ವಾಮೀಜಿ, ಬಿಲ್ವಪತ್ರೆ ಮಠದ ಶಿವಲಿಂಗ ಸ್ವಾಮೀಜಿ, ಅತ್ತಿಹಳ್ಳಿ ಮಠ ಸೇರಿದಂತೆ ವಿವಿಧ ಮಠಗಳ ಗುರುಗಳು, ವಿಧಾನ ಪರಿಷತ್ ಸದಸ್ಯ ಎಸ್.ರವಿ, ದೇವಾಲಯದ ಪ್ರಧಾನ ಅರ್ಚಕ ಪರಶಿವಯ್ಯ, ಅರ್ಚಕ ವೀರಭದ್ರಯ್ಯ ಮತ್ತು ಭಕ್ತರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.