ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಥಿಲಾವಸ್ಥೆ ಅಂಗನವಾಡಿ ಕೇಂದ್ರ ಸರಿಪಡಿಸಲು ಪೋಷಕರ ಆಗ್ರಹ

ಆಗ್ರಹ
Published 13 ಜೂನ್ 2024, 15:58 IST
Last Updated 13 ಜೂನ್ 2024, 15:58 IST
ಅಕ್ಷರ ಗಾತ್ರ

ಕನಕಪುರ: ನಗರದ ನಗರಸಭೆ 30ನೇ ವಾರ್ಡ್‌ನ ಮೆಳೆಕೋಟೆ ಕಾಲೊನಿಯಲ್ಲಿ ಇರುವ ಅಂಗನವಾಡಿ ಕೇಂದ್ರದ ಕಟ್ಟಡದ ಮೇಲ್ಛಾವಣಿ ಉದುರಿ ಬೀಳುತ್ತಿದೆ.

ಈ ಅಂಗನವಾಡಿ ಕೇಂದ್ರ 50 ವರ್ಷಗಳ ಹಿಂದೆ ನಿರ್ಮಾಣಗೊಂಡಿದೆ. ಸಂಬಂಧಪಟ್ಟವರ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಮಕ್ಕಳ ಪೋಷಕರು.

ಪರಿಶಿಷ್ಟ ಜಾತಿಯ 20 ಮಕ್ಕಳು ಇಲ್ಲಿ ಶಿಕ್ಷಣ ಅಭ್ಯಾಸ ಮಾಡುತ್ತಿದ್ದಾರೆ. ಮಕ್ಕಳಿಗೆ ತಾತ್ಕಾಲಿಕವಾಗಿ ಬೇರೆ ಕಡೆ ವ್ಯವಸ್ಥೆ ಮಾಡಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.

ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು. ಹೊಸ ಕಟ್ಟಡ ನಿರ್ಮಾಣ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎನ್ನುತ್ತಾರೆ ಸಿಡಿಪಿಒ ಸತ್ಯನಾರಾಯಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT