ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ಶುದ್ಧ ನೀರಿನ ಘಟಕದ ನಾಮಫಲಕದಲ್ಲಿ ಶಾಸಕ, ಸಂಸದ ಭಾವಚಿತ್ರ
Last Updated 17 ಏಪ್ರಿಲ್ 2023, 9:20 IST
ಅಕ್ಷರ ಗಾತ್ರ

ಕನಕಪುರ: ವಿಧಾನಸಭೆಯ ಚುನಾವಣೆ ರಂಗೇರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಯಾಗಿದ್ದರೂ, ಕನಕಪುರದಲ್ಲಿ ಅದು ಉಲ್ಲಂಘನೆಯಾದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಕಣ್ಮುಚ್ಚಿ ಕುಳಿತಂತಿದೆ.

ಕನಕಪುರ ವಿಧಾನಸಭಾ ಕ್ಷೇತ್ರದ ಪೊಲೀಸ್‌ ಕ್ವಾಟ್ರಸ್‌ನಲ್ಲಿ ಸಾರ್ವಜನಿಕರಿಗಾಗಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕದ ನಾಮಫಲಕದಲ್ಲಿ ಸಂಸದ ಡಿ.ಕೆ.ಸುರೇಶ್‌ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಭಾವಚಿತ್ರಗಳಿದ್ದು ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಮಾಡಿದ್ದರೂ, ಅದರ ಮೇಲೆ ಯಾವುದೇ ಜನಪ್ರತಿನಿಧಿಗಳ ಭಾವಚಿತ್ರ ಇರುವಂತಿಲ್ಲ. ನೀತಿ ಸಂಹಿತೆ ಜಾರಿಯಾದ ನಂತರವು ನಾಮಫಲಕಗಳಲ್ಲಿ ಭಾವಚಿತ್ರ ತೆಗೆಯದಿರುವುದು ಚುನಾವಣಾ ಅಧಿಕಾರಿಗಳ ಕರ್ತವ್ಯ ಲೋಪವಾಗಿದೆ.

ಕನಕಪುರ ವಿಧಾನಸಭಾ ಕ್ಷೇತ್ರದ ನೀತಿ ಸಂಹಿತೆಯ ನೋಡಲ್‌ ಅಧಿಕಾರಿ ಬೈರಪ್ಪ ಕನಕಪುರ ವಿಧಾನಸಭಾ ಕ್ಷೇತ್ರದ ನೀತಿ ಸಂಹಿತೆ ಜಾರಿಯಲ್ಲಿ ಲೋಪವಾಗಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಚುನಾವಣಾ ಅಧಿಕಾರಿಗಳಿಗೆ ಸೂಚಿಸಲಾಗುವುದು. ಜೊತೆಗೆ ಭಾವಚಿತ್ರಗಳಿದ್ದರೆ, ಅವುಗಳನ್ನು ತೆಗೆಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT