ಕನಕಪುರ: ವಿಶ್ವಕರ್ಮ ಸಮಾಜವು ಕುಲಕಸುಬನ್ನೇ ನಂಬಿಕೊಂಡು ಜೀವನ ನಡೆಸುತ್ತಿದೆ. ಹೆಚ್ಚಿನ ಜನರು ಶಿಕ್ಷಣ ಪಡೆದಿಲ್ಲ, ಸಮುದಾಯದ ಜನತೆ ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಉನ್ನತ ಶಿಕ್ಷಣ ಕೊಡಿಸಬೇಕು ಎಂದು ವಿಶ್ವಕರ್ಮ ಜನಾಂಗದ ಮುಖಂಡ ಸಿದ್ದಾಚಾರ್ ತಿಳಿಸಿದರು.

ತಾಲ್ಲೂಕು ಕಚೇರಿ ತಹಶೀಲ್ದಾರ್ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಮಂಗಳವಾರ ನಡೆದ ವಿಶ್ವಕರ್ಮ ಜಯಂತಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಸಮುದಾಯದ 45 ಲಕ್ಷ ಜನರಿದ್ದಾರೆ.ಆದರೆ ನಮ್ಮವರಿಗೆ ರಾಜಕೀಯ ಸ್ಥಾನಮಾನ ದೊರೆತಿಲ್ಲ. ಸಮುದಾಯದ ಜನತೆ ಸಂಘಟಿತರಾಗಬೇಕಿದೆ, ಸಮುದಾಯದಲ್ಲಿ ಉನ್ನತ ಸ್ಥಾನಮಾನದಲ್ಲಿರುವವರು ಕೆಳಸ್ಥರದಲ್ಲಿರುವವರ ಶಿಕ್ಷಣಕ್ಕೆ ಮತ್ತು ಪ್ರಗತಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು. ಕೇಂದ್ರ ಸರ್ಕಾರವು ಪಿಎಂ ವಿಶ್ವಕರ್ಮ ಯೋಜನೆ ಮತ್ತು ಮುದ್ರಾ ಯೋಜನೆ ಅಡಿ ₹ 5 ಲಕ್ಷದಿಂದ ₹ 50 ಲಕ್ಷದವರೆಗೆ ಸಾಲ ಸೌಲಭ್ಯವನ್ನು ನೀಡುತ್ತಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು.

ಗ್ರೇಡ್-2 ತಹಶೀಲ್ದಾರ್ ಶಿವಕುಮಾರ್, ದಮ್ಮದೀವಿಗೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವಸಂತ, ಸಾಹಿತಿ ಕೂ.ಗಿ.ಗಿರಿಯಪ್ಪ, ವಿಶ್ವಕರ್ಮ ಸ್ವಯಂ ಸೇವಾ ಸಂಘದ ಅಧ್ಯಕ್ಷ ಶಿವರುದ್ರಚಾರಿ, ಉಪಾಧ್ಯಕ್ಷ ಕುಮಾರ್, ಪ್ರಧಾನ ಕಾರ್ಯದರ್ಶಿ ಮಹೇಶ್, ಮುಖಂಡ ಗರುಡಾ ಚಾರ್, ನಗರ ಸಭೆ ಮಾಜಿ ಸದಸ್ಯ ಶಿವರಾಮಾಚಾರಿ, ರಾಘವೇಂದ್ರ, ಮುಖಂಡ ನೀಲಿ ರಮೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.