ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವೇಕಾನಂದರ ಆದರ್ಶ ಇಂದಿನ ಯುವಜನತೆಗೆ ಸ್ಫೂರ್ತಿ

Published 13 ಜನವರಿ 2024, 7:23 IST
Last Updated 13 ಜನವರಿ 2024, 7:23 IST
ಅಕ್ಷರ ಗಾತ್ರ

ಚನ್ನಪಟ್ಟಣ: ನಗರದ ಮಿಲೇನಿಯಂ ಪಬ್ಲಿಕ್ ಶಾಲೆಯಲ್ಲಿ ಶುಭೋದಯ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಲಬ್ ಹಾಗೂ ಅನಿಕೇತನ ಕನ್ನಡ ಸಾಂಸ್ಕೃತಿಕ ಬಳಗ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಸ್ವಾಮಿ ವಿವೇಕಾನಂದ ಜಯಂತೋತ್ಸವ ನಡೆಯಿತು.

ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ಮಾತನಾಡಿದರು.

ಸಾಮಾಜಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಮಹಾನ್ ದಾರ್ಶನಿಕ ಸ್ವಾಮಿ ವಿವೇಕಾನಂದರು. ಅವರ ಆದರ್ಶ ಬದುಕಿನ ಬಗ್ಗೆ ಇಂದಿನ ಯುವ ಜನತೆಗೆ ಅಗತ್ಯವಾಗಿ ತಿಳಿದುಕೊಳ್ಳಬೇಕಾಗಿದೆ ಎಂದರು.

ಸ್ವಾಮಿ ವಿವೇಕಾನಂದರು ಭಾರತೀಯರ ಬಗ್ಗೆ ವಿದೇಶಿಗರಲ್ಲಿ ಇದ್ದ ಕೀಳರಿಮೆಯನ್ನು ಹೋಗಲಾಡಿಸಿ, ವಿಶ್ವಕ್ಕೆ ಸಹೋದರತೆಯ ಸಂದೇಶ ಸಾರಿದ ಮಹಾಪುರುಷ. ಅವರ ದಿವ್ಯವಾಣಿಗಳು ಯುವಜನತೆಗೆ ಸ್ಫೂರ್ತಿ ನೀಡುತ್ತವೆ ಎಂದರು.

ಶುಭೋದಯ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಲಬ್ ಅಧ್ಯಕ್ಷ ಎಂ.ಶಿವಮಾದು ಮಾತನಾಡಿ, ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ದೊಡ್ಡದು, ಸಿದ್ಧಾಂತ ವಿಶಾಲವಾದದ್ದು, ಪ್ರತಿಯೊಬ್ಬರು ಸಹೋದರತೆ, ಸಮನ್ವಯತೆ, ಸಮಗ್ರತೆ ಹಾಗೂ ಭಾತೃತ್ವದಿಂದ ಬದುಕು ನಡೆಸಬೇಕು ಎಂದು ಸಾರಿದ ಮಹನೀಯರು ವಿವೇಕಾನಂದರು.

ಅರುಣ ಗೌಡ, ಸಿದ್ದರಾಜೇಗೌಡ, ಲಕ್ಷ್ಮಮ್ಮ, ಎಚ್.ಆರ್.ರಾಮಚಂದ್ರ, ಸಿ.ಎಸ್. ಶ್ರೀಕಂಠಯ್ಯ, ಅಂಕೇಗೌಡ, ಕೃಷ್ಣ, ಸಿ.ಕೆ.ಕೃಷ್ಣಯ್ಯ, ಕವಿತಾ, ಪೂರ್ಣಿಮಾ, ಪಂಕಜ, ಸಂಗೀತಾ, ಗೀತಾ, ಫಾತಿಮಾ, ಹರ್ಷಿತಾ, ಕುಸುಮ್ ಬಾನು, ರೀಹಾನ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT