1ರಂದು ಭವತಾರಿಣಿ ಆಶ್ರಮದಲ್ಲಿ ವಿವೇಕಾನಂದ ಕುಟೀರ ಉದ್ಘಾಟನೆ

ಸೋಮವಾರ, ಜೂನ್ 17, 2019
28 °C

1ರಂದು ಭವತಾರಿಣಿ ಆಶ್ರಮದಲ್ಲಿ ವಿವೇಕಾನಂದ ಕುಟೀರ ಉದ್ಘಾಟನೆ

Published:
Updated:

ಮಾಗಡಿ: ತಾಲ್ಲೂಕಿನ ಪೋಲೋಹಳ್ಳಿ ಭವತಾರಿಣಿ ಆಶ್ರಮದಲ್ಲಿ ಭಕ್ತರ ಅನುಕೂಲಕ್ಕಾಗಿ ನಿರ್ಮಿಸಿರುವ ವಿವೇಕಾನಂದ ಕುಟೀರ ಉದ್ಘಾಟನೆ ಹಾಗೂ ಚಂಡಿಕಾಹೋಮ ಜೂನ್‌ 1 ರಂದು ನಡೆಯಲಿದೆ ಎಂದು ಮಾತಾಜಿ ವಿವೇಕಮಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಅಂದು ಬೆಳಿಗ್ಗೆ 7 ಗಂಟೆಗೆ ಚಂಡಿಕಾಹೋಮ ನಡೆಯಲಿದೆ. 9 ಗಂಟೆಗೆ ವಿವೇಕಾನಂದ ಕುಟೀರವನ್ನು ಆದಿಚುಂಚನಗಿರಿ ಮಠಾಧ್ಯಕ್ಷ ಡಾ.ನಿರ್ಮಲಾನಂದ ನಾಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ.

ಮಂಗಳೂರಿನ ರಾಮಕೃಷ್ಣ ಮಠದ ಸ್ವಾಮಿ ಜಿತಕಾಮಾನಂದಜಿ ಮಹಾರಾಜ್‌, ಗದಗ ಮಠದ ಸ್ವಾಮಿ ನಿರ್ಭಯಾನಂದ ಸರಸ್ವತಿ ವಿವೇಕಾನಂದರ ದೃಷ್ಟಿಯಲ್ಲಿ ಶ್ರೀರಾಮಕೃಷ್ಣ ಪರಮಹಂಸ ಕುರಿತು ಉಪನ್ಯಾಸ ನೀಡಲಿದ್ದಾರೆ. ಶಾಸಕ ಎ.ಮಂಜುನಾಥ ಭಾಗವಹಿಸಲಿದ್ದಾರೆ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !