ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಕ್ಕಲಿಗರ ಭವನ ಉದ್ಘಾಟನೆ ನಾಳೆ

Last Updated 23 ಡಿಸೆಂಬರ್ 2019, 14:42 IST
ಅಕ್ಷರ ಗಾತ್ರ

ರಾಮನಗರ: ಇಲ್ಲಿನ ದ್ಯಾವರಸೇಗೌಡನದೊಡ್ಡಿ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 'ಒಕ್ಕಲಿಗರ ಭವನ'ದ ಉದ್ಘಾಟನಾ ಸಮಾರಂಭ ಇದೇ 25ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಒಕ್ಕಲಿಗರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹನುಮೇಲಿಂಗು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಮಾರಂಭವನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಉದ್ಘಾಟಿಸಲಿದ್ದಾರೆ. ಶಾಸಕ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ನಿರ್ಮಲಾನಂದನಾಥ ಸ್ವಾಮೀಜಿ, ಕುಮಾರಚಂದ್ರಶೇಖರನಾಥ ಶ್ರೀ, ನಂಜಾವಧೂತ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್, ಶಾಸಕ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಎ.ಬಿ. ಚೇತನ್ ಕುಮಾರ್ ಮಾತನಾಡಿ :ಅತಿಥಿಗಳನ್ನು ಬೆಂಗಳೂರು-ಮೈಸೂರು ಮುಖ್ಯ ರಸ್ತೆಯಿಂದ ಒಕ್ಕಲಿಗರ ಭವನದವರೆಗೆ ಕಲಾತಂಡಗಳೊಂದಿಗೆ ಮೆರವಣಿಗೆಯಲ್ಲಿ ಕರೆ ತರಲಾಗುವುದು’ ಎಂದರು.

ಒಕ್ಕಲಿಗರ ಭವನದಲ್ಲಿ 100 ವಿದ್ಯಾರ್ಥಿಗಳಿಗೆ ಉಚಿತವಾಗಿ ವಸತಿ ಕಲ್ಪಿಸಲು ಕೊಠಡಿ ನಿರ್ಮಾಣ, ಆಡಳಿತ ಕಚೇರಿ, ಸಮುದಾಯದ ಕಾರ್ಯಕ್ರಮಗಳ ನಡೆಯಲು ಒಂದು ಸುಂದರವಾದ ಸಭಾಂಗಣ ಸಭಾಂಗಣ ಮಾಡಲಾಗಿದೆ. ಕೆಳ ಅಂತಸ್ತಿನಲ್ಲಿ ವಾಣಿಜ್ಯ ಮಳಿಗೆಗಳನ್ನು ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ 1.20 ಎಕರೆ ಜಮೀನಿನಲ್ಲಿ ಒಕ್ಕಲಿಗ ಸಮುದಾಯ ಭವನ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಒಕ್ಕಲಿಗರ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಜೆ.ಎಲ್. ಶಂಕರಾನಂದ ಮಾತನಾಡಿ, ಒಕ್ಕಲಿಗರ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಕಚೇರಿಯನ್ನು ಸಹ ಅಂದು ಉದ್ಘಾಟಿಸಲಾಗುವುದು ಎಂದು ತಿಳಿಸಿದರು.

ಸಂಘದ ಖಜಾಂಚಿ ನಂದೀಶ್, ಸಹ ಕಾರ್ಯದರ್ಶಿಗಳಾದ ಆರ್.ಪಿ. ಶಿವಪ್ರಕಾಶ್, ಬೈರೇಗೌಡ, ನಿರ್ದೇಶಕರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT