ಭಾನುವಾರ, ಮೇ 2, 2021
28 °C

ಕುದೂರು: ಸ್ವಯಂಪ್ರೇರಿತ ಲಾಕ್‌ಡೌನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುದೂರು(ಮಾಗಡಿ): ಗ್ರಾಮದಲ್ಲಿ ಕೊರೊನಾ ಸೋಂಕು ಉಲ್ಬಣವಾಗಿರುವ ಹಿನ್ನೆಲೆಯಲ್ಲಿ ವರ್ತಕರ ಸಂಘ ಮತ್ತು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಬುಧವಾರದಿಂದ ಸ್ವಯಂಪ್ರೇರಿತ ಲಾಕ್‌ಡೌನ್‌ ಮಾಡಲಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ ಚಿಕ್ಕರಾಜು ತಿಳಿಸಿದರು.

ಸ್ವಯಂಪ್ರೇರಿತ ಲಾಕ್‌ಡೌನ್‌ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಜಾನೆಯಿಂದ ಮಧ್ಯಾಹ್ನ 1.30ರ ತನಕ ವರ್ತಕರು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಮಧ್ಯಾಹ್ನ 1.30ರ ನಂತರ ಹೋಟೆಲ್‌, ಅಂಗಡಿಮುಗ್ಗಟ್ಟುಗಳು, ಇತರೆ ಎಲ್ಲಾ ವಾಣಿಜ್ಯ ವ್ಯವಹಾರಗಳನ್ನು ವರ್ತಕರೆ ಸ್ವಯಂ ಪ್ರೇರಿತರಾಗಿ ಬಂದ್‌ ಮಾಡಿ ಗ್ರಾಮ ಪಂಚಾಯಿತಿಯೊಂದಿಗೆ ಸಹಕರಿಸುತ್ತಿದ್ದಾರೆ ಎಂದರು.

ಕೋವಿಡ್‌ ಸೋಂಕಿನಿಂದ ಗ್ರಾಮ ಸುರಕ್ಷಿತವಾಗಿರಲಿ ಎಂಬ ಸದುದ್ದೇಶದಿಂದ ಲಾಕ್‌ಡೌನ್‌ ಮಾಡಲಾಗುತ್ತಿದೆ ಎಂದು ತಿಳಿಸಿದರು.

‘ಅಂಗಡಿ ಮುಗ್ಗಟ್ಟುಗಳು ಮುಚ್ಚಿದ್ದವು. ಆಟೊಗಳ ಸಂಚಾರ ವಿರಳವಾಗಿತ್ತು. ಗ್ರಾಮದಲ್ಲಿ ಮಧ್ಯಾಹ್ನ ಮಳೆ ಸುರಿಯಿತು. ಜನಸಾಮಾನ್ಯರು ಮನೆಯಿಂದ ಹೊರಗೆ ಬಂದಿರಲಿಲ್ಲ. ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಎಲ್ಲರೂ ಸಹಕಾರ ನೀಡಬೇಕು. ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು. ಆಗಷ್ಟೇ ಸೋಂಕು ನಿಯಂತ್ರಣ ಸಾಧ್ಯ’ ಎಂದು ಉಪಾಧ್ಯಕ್ಷ ಕೆ.ಬಿ. ಬಾಲರಾಜು ಮನವಿ ಮಾಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು