ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಮಿಂಚಿನ ನೋಂದಣಿ ಅಭಿಯಾನಕ್ಕೆ ಚಾಲನೆ

Last Updated 6 ಜನವರಿ 2020, 13:51 IST
ಅಕ್ಷರ ಗಾತ್ರ

ರಾಮನಗರ: ಯುವ ಮತದಾರರನ್ನು ಮತದಾರರ ಪಟ್ಟಿಗೆ ನೋಂದಾಯಿಸುವ ಸಲುವಾಗಿ ಜಿಲ್ಲೆಯಾದ್ಯಂತ ಸೋಮವಾರ ಮಿಂಚಿನ ನೋಂದಣಿ ಅಭಿಯಾನ ಆರಂಭಿಸಿದ್ದು, ಇದೇ 8ರವರೆಗೆ ಮುಂದುವರಿಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಪಿ. ವಿಜಯ್‌ ತಿಳಿಸಿದರು.

‘ಎಲ್ಲಾ ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳಿಂದ ಮಿಂಚಿನ ನೋಂದಣಿ ಕಾರ್ಯಕ್ರಮ ನಡೆಸಲಾಗುವುದು. ಅಭಿ ಯಾನಕ್ಕೆ ಅಗತ್ಯ ಇರುವ ಎಲ್ಲಾ ನಮೂನೆಗಳನ್ನು ಮತಗಟ್ಟೆ ಅಧಿಕಾರಿಗಳಿಗೆ ಸರಬರಾಜು ಮಾಡಲಾಗಿದೆ. ಜನವರಿ 1, 2020ಕ್ಕೆ 18 ವರ್ಷ ತುಂಬಿದ ವಿದ್ಯಾರ್ಥಿಗಳು ನೋಂದಣಿ ಮಾಡಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕ್ಯಾಂಪಸ್ ಅಂಬಾಸಿಡರ್ ಮತ್ತು ಇಲ್‌ಸಿಗಳ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು.

‘ಅಂತಿಮ ಮತದಾರರ ಪಟ್ಟಿಯನ್ನು ಫೆಬ್ರವರಿ 7ರಂದು ಪ್ರಕಟಿಸಲಾಗುವುದು. ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಸಂಬಂಧಪಟ್ಟಂತೆ ಅರ್ಹ ಶಿಕ್ಷಕ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವ ಸಂಬಂಧ ಸೋಮವಾರದಿಂದ ಬುಧವಾರದವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ನಡೆಲಾಗುತ್ತಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಇದೇ 16ರಂದು ಪ್ರಕಟಿಸಲಾಗುವುದು’ ಎಂದರು.

ಇದೇ 25ರಂದು ನಡೆಯುವ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಯುವ ಮತದಾರರಿಗೆ ಪಿವಿಸಿ (ಪ್ಲಾಸ್ಟಿಕ್ ಕಾರ್ಡ್) ಕಾರ್ಡ್ ಗಳನ್ನು ವಿತರಿಸಲಾಗುವುದು. ಮೊದಲು ಕಾರ್ಡ್ ಗಳಿಗೆ ಲ್ಯಾಮಿನೇಷನ್ ಮಾಡಿ ನೀಡಲಾಗುತ್ತಿತ್ತು. ಈಗ ಪ್ಲಾಸ್ಟಿಕ್ ಕಾರ್ಡ್ ಗಳನ್ನು ನೀಡುವುದರಿಂದ ಹೆಚ್ಚಿನ ವರ್ಷ ಬಾಳಿಕೆ ಬರುತ್ತದೆ ಎಂದು ತಿಳಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ- ಮಾಹಿತಿಯಂತೆ ಜಿಲ್ಲೆಯಲ್ಲಿ ಒಟ್ಟು 8,74,800 ಮತದಾರರರಿದ್ದಾರೆ. ಇದರಲ್ಲಿ 18 ರಿಂದ 19ನೇ ವಯಸ್ಸಿನ 5634, 20 ರಿಂದ 29 ವಯಸ್ಸಿನ 1,68,463, 30 ರಿಂದ 39 ವಯಸ್ಸಿನ 2,24,192, 40 ರಿಂದ 49 ವಯಸ್ಸಿನ 1,80.931 ಮತದಾರರು ಇದ್ದಾರೆ. ಅಂತೆಯೇ 50ರಿಂದ 59 ವಯಸ್ಸಿನ 1,31,943, 60 ರಿಂದ 69 ವಯಸ್ಸಿನ 91,990, 70 ರಿಂದ 79 ವಯಸ್ಸಿನ 49,634 ಹಾಗೂ 80 ವರ್ಷ ಮೇಲ್ಪಟ್ಟ 22,013 ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.

ಕಳೆದ ಒಂದು ವರ್ಷದಲ್ಲಿ ಜಿಲ್ಲೆಯಲ್ಲಿ 8417 ಮತದರಾರು ಹೆಚ್ಚಾಗಿದ್ದಾರೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT