ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರಸಭೆ ಚುನಾವಣೆಗೆ ಇಂದು ಮತದಾನ: ಸಿದ್ಧತೆ ಪೂರ್ಣ

135 ಮತಗಟ್ಟೆ ಗುರುತು * ಕೋವಿಡ್ ನಿಯಮ ಪಾಲನೆಗೆ ಒತ್ತು
Last Updated 27 ಏಪ್ರಿಲ್ 2021, 3:03 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯ ರಾಮನಗರ ಹಾಗೂ ಚನ್ನಪಟ್ಟಣ ನಗರಸಭೆಯ ಒಟ್ಟು 62 ವಾರ್ಡುಗಳಿಗೆ ಮಂಗಳವಾರ ಮತದಾನ ನಡೆಯಲಿದ್ದು, 236 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಆಗಲಿದೆ.

ಕೋವಿಡ್ ನಿಯಮಗಳ ಪಾಲನೆಗೆ ಒತ್ತು ಕೊಟ್ಟು ಚುನಾವಣೆ ನಡೆಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಬೆಳಿಗ್ಗೆ 7ರಿಂದ ಮತದಾನ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಸಂಜೆ 6ರವರೆಗೂ ಮತದಾನಕ್ಕೆ ಅವಕಾಶ ಇರಲಿದೆ. ಬರೋಬ್ಬರಿ 1.38 ಲಕ್ಷ ಮತದಾರರು ತಮ್ಮ ಹಕ್ಕು ಚಲಾವಣೆ ಮಾಡುವ ಅಧಿಕಾರ ಹೊಂದಿದ್ದಾರೆ. ಚುನಾವಣಾ ಸಿಬ್ಬಂದಿ ಈಗಾಗಲೇ ಮತಗಟ್ಟೆಗಳಿಗೆ ತೆರಳಿದ್ದು, ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ.

ಅಧಿಕಾರಿಗಳ ನಿಯೋಜನೆ: ಪ್ರತಿ ನಗರಸಭೆಗೆ ತಲಾ 4 ಚುನಾವಣಾಧಿಕಾರಿ, 4 ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಇದಲ್ಲದೆ 83 ಪಿ.ಆರ್.ಒ, 83 ಎ.ಪಿ.ಆರ್.ಒ, 166 ಪಿಒ ಸೇರಿದಂತೆ ಒಟ್ಟು 332 ಮತಗಟ್ಟೆ ಸಿಬ್ಬಂದಿಗಳು ಚುನಾವಣೆ ಕಾರ್ಯ ನಿರ್ವಹಿಸಲಿದ್ದಾರೆ. ಮತದಾನಕ್ಕೆ ವಿ.ವಿ. ಪ್ಯಾಟ್‌ ಯಂತ್ರಗಳನ್ನು ಬಳಸಲಾಗುತ್ತಿದೆ.

ಎಷ್ಟು ಮತಗಟ್ಟೆ: ರಾಮನಗರ ನಗರಸಭೆ ವ್ಯಾಪ್ತಿಯಲ್ಲಿ 72 ಮತಗಟ್ಟೆ, 4 ಹೆಚ್ಚುವರಿ ಮತಗಟ್ಟೆ ಸೇರಿದಂತೆ ಒಟ್ಟು 76 ಮತಗಟ್ಟೆ ತೆರೆಯಲಾಗಿದೆ. ಚನ್ನಪಟ್ಟಣದಲ್ಲಿ 57 ಮತಗಟ್ಟೆಗಳು ಹಾಗೂ 2 ಹೆಚ್ಚುವರಿ 2 ಮತಗಟ್ಟೆ ಸೇರಿದಂತೆ ಒಟ್ಟು 59 ಮತಗಟ್ಟೆಗಳು ಕಾರ್ಯ ನಿರ್ವಹಿಸಲಿವೆ. ರಾಮನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಮಸ್ಟರಿಂಗ್‌ ಕಾರ್ಯ ನಡೆಯಿತು. ಚುನಾವಣಾ ಸಿಬ್ಬಂದಿಗೆ ಅಗತ್ಯ ತರಬೇತಿ ಮತ್ತು ಕೋವಿಡ್ ನಿಯಮ ಪಾಲನೆ ಕುರಿತು ಮಾಹಿತಿ ನೀಡಲಾಯಿತು. ಜಿಲ್ಲಾಧಿಕಾರಿ ಕೆ. ರಾಕೇಶ್‌ಕುಮಾರ್ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT