ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಲತಾಣದಲ್ಲಿ ಮತ ಹಾಕಿದ ವಿಡಿಯೊ!

Published 27 ಏಪ್ರಿಲ್ 2024, 6:40 IST
Last Updated 27 ಏಪ್ರಿಲ್ 2024, 6:40 IST
ಅಕ್ಷರ ಗಾತ್ರ

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಮತ ಹಾಕುವುದನ್ನು ಮೊಬೈಲ್‌ ಫೋನ್‌ನಲ್ಲಿ ಚಿತ್ರೀಕರಿಸಿಕೊಂಡಿರುವ ಮತದಾರೊಬ್ಬರು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮೊದಲು ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಹೆಸರಿನ ಮುಂದೆ ಬೆರಳು ತೋರಿಸುವ ಮತದಾರ ಬಳಿಕ ಡಿ.ಕೆ. ಸುರೇಶ್ ಹೆಸರಿನ ಮುಂದಿರುವ ಬಟನ್ ಒತ್ತಿ ಮತ ಚಲಾಯಿಸುವ ದೃಶ್ಯ ವಿಡಿಯೊದಲ್ಲಿದೆ. ಇನ್‌ಸ್ಟಾಗ್ರಾಂನಲ್ಲಿ ಡಿ.ಕೆ. ಸುರೇಶ್ ಅಭಿಮಾನ ಬಳಗ ಹೆಸರಿನ ಖಾತೆಯಲ್ಲಿ ಈ ವಿಡಿಯೊ ಹರಿದಾಡುತ್ತಿದೆ.

ಮತಗಟ್ಟೆಯೊಳಗೆ ಮೊಬೈಲ್‌ ಫೋನ್‌ ತೆಗೆದುಕೊಂಡು ಹೋಗುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದ್ದರೂ ಮತದಾರ ಹೇಗೆ ಫೋನ್‌ ಕೊಂಡೊಯ್ದ ಮತ್ತು ಚತ್ರೀಕರಿಸಿಕೊಂಡ ಎಂಬ ಬಗ್ಗೆ ಚರ್ಚೆ ನಡೆದಿದೆ. ವಿಡಿಯೊ ಸೆರೆ ಹಿಡಿದು, ಜಾಲತಾಣದಲ್ಲಿ ಹಂಚಿಕೊಂಡ ಮತದಾರ ಯಾರು ಮತ್ತು ಇದು ಯಾವ ಮತಗಟ್ಟೆಯಲ್ಲಿ ನಡೆದಿದೆ ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT