ರಾಮನಗರ: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ನಗರದ ರಂಗರಾಯರದೊಡ್ಡಿ ಕೆರೆಯಲ್ಲಿ ವಿವಿಧ ಜಲಕ್ರೀಡೆಗಳಿಗೆ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಶನಿವಾರ ಚಾಲನೆ ನೀಡಿದರು. ಬಳಿಕ ಕೆರೆಯಲ್ಲಿ ವಾಟರ್ ಬೈಕ್ ರೈಡ್ ಮಾಡಿ ಸಂಭ್ರಮಿಸಿದರು.

ಬಳಿಕ ಮಾತನಾಡಿದ ಅವರು, ‘ರಾಮನಗರದ ಜನರ ಪಾಲಿಗೆ ಇದೊಂದು ಐತಿಹಾಸಿಕ ದಿನ. ಜಲಕ್ರೀಡೆಗಳ ಅನುಭವ ಪಡೆಯಲು ನಮ್ಮ ಜಿಲ್ಲೆ ಸೇರಿದಂತೆ ಸುತ್ತಮುತ್ತ ಯಾವ ಜಿಲ್ಲೆಯಲ್ಲೂ ಇಂತಹ ಅವಕಾಶ ಇರಲಿಲ್ಲ. ಇದೀಗ ಪ್ರವಾಸೋದ್ಯಮ ಅಭಿವೃದ್ಧಿಯ ದೂರದೃಷ್ಟಿಯಿಂದ ಜಿಲ್ಲೆಯ ಐದು ಕೆರೆಗಳಲ್ಲಿ ಜಲಕ್ರೀಡೆಗೆ ಅವಕಾಶ ಮಾಡಿಕೊಡಲಾಗಿದೆ’ ಎಂದರು.

‘ರಾಮನಗರದ ರಂಗರಾಯರದೊಡ್ಡಿ ಕೆರೆ ಸೇರಿದಂತೆ ಬಿಡದಿಯ ನೆಲ್ಲಿಗುಡ್ಡ ಕೆರೆ, ಮಾಗಡಿ ವೈ.ಜಿ. ಗುಡ್ಡ ಕೆರೆ ಹಾಗೂ ಹಾರೋಹಳ್ಳಿ ತಾಲ್ಲೂಕಿನ ರಾವುತ್ತನಹಳ್ಳಿ ಕೆರೆಯಲ್ಲಿ ಜಲ ಕ್ರೀಡೆಗಳ ಸೇವೆ ಆರಂಭಿಸಲಾಗಿದೆ. ಮುಂದೆ ಕೆರೆಗಳ ಬಳಿ ರೆಸ್ಟೋರೇಂಟ್, ವಸತಿ ಗೃಹ, ಸುಸಜ್ಜಿತ ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು’ ಎಂದು ಹೇಳಿದರು.

‘ಜಲಕ್ರೀಡೆಗಳಿಗೆ ಟಿಕೆಟ್ ದರಗಳು ಇನ್ನಷ್ಟೇ ನಿಗದಿಯಾಗಬೇಕು. ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಸೇವೆ ನೀಡಲು ಸೂಚಿಸಲಾಗಿದೆ. ಕೆರೆಯಂಗಳದಲ್ಲಿ ಸುಸಜ್ಜಿತ ವಿದ್ಯುತ್ ದೀಪಗಳನ್ನು ಅಳವಡಿಸಿ ರಾತ್ರಿ 8 ಗಂಟೆವರೆಗೆ ವಾಯುವಿಹಾರಕ್ಕೆ ಅವಕಾಶ ಮಾಡಿ ಕೊಡಲಾಗುವುದು’ ಎಂದು ತಿಳಿಸಿದರು.

ಕೆಎಸ್ಐಸಿ ಅಧ್ಯಕ್ಷ ಎಸ್. ಗಂಗಾಧರ್, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಜಯ್ ದೇವು, ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ. ರಾಜು, ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ, ಉಪಾಧ್ಯಕ್ಷೆ ಆಯಿಷಾ ಬಾನು, ಪೌರಾಯುಕ್ತ ಡಾ. ಜಯಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ. ಚೇತನ್ ಕುಮಾರ್, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪಂಚಾಯಿತಿ ಸಿಇಒ ಅನ್ಮೋಲ್ ಜೈನ್, ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ ಗೌಡ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.