ಶುಕ್ರವಾರ, ಫೆಬ್ರವರಿ 21, 2020
16 °C

ಇ.ಡಿ. ವಿಚಾರಣೆಗೆ ಸಂಪೂರ್ಣ ಸಹಕಾರ: ಸುರೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ರಾಮನಗರ: ನ್ಯಾಯಾಲಯದ ‌ಆದೇಶದಂತೆ ನಮ್ಮ ಮನೆಯಲ್ಲಿಯೇ ವಿಚಾರಣೆ ನಡೆದಿದ್ದು, ತಾಯಿ ಗೌರಮ್ಮ ಇ.ಡಿ. ಅಧಿಕಾರಿಗಳ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಮುಂದೆಯೂ ವಿಚಾರಣೆ ನಡೆಸಿದರೆ ಸಹಕಾರ ನೀಡುತ್ತೇವೆ ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು.

ಕೋಡಿಹಳ್ಳಿ ನಿವಾಸದಲ್ಲಿ ಮಂಗಳವಾರ ರಾತ್ರಿ  ಇ.ಡಿ. ಅಧಿಕಾರಿಗಳಿಂದ ಗೌರಮ್ಮ ಅವರ ವಿಚಾರಣೆ ಮುಕ್ತಾಯದ ಬಳಿಕ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

‘ಅಮ್ಮ‌ನಿಗೆ‌ ಜ್ವರ ಬಂದಿತ್ತು. 80 ವರ್ಷ ವಯಸ್ಸಾದರೂ ಅಧಿಕಾರಿಗಳ ಪ್ರಶ್ನೆಗಳಿಗೆ ಸೂಕ್ತ ರೀತಿಯಲ್ಲಿ ಉತ್ತರಿಸಿದ್ದಾರೆ. ಗೊಂದಲ‌ ಸೃಷ್ಟಿಯಾಗಬಾರದು ಎನ್ನುವ ಕಾರಣಕ್ಕೆ ಇಲ್ಲಿಗೆ ಬರದಂತೆ ಅಭಿಮಾನಿಗಳಿಗೆ, ಕಾರ್ಯಕರ್ತರಿಗೆ ಹೇಳಿದ್ದೆವು. ಸಹಕರಿಸಿದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇವೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು