ಶುಕ್ರವಾರ, ಸೆಪ್ಟೆಂಬರ್ 20, 2019
27 °C
ಜ್ಞಾನ ವಿಕಾಸ ಪದವಿಪೂರ್ವ ಕಾಲೇಜಿನಲ್ಲಿ ಸ್ವಾಗತ ಸಮಾರಂಭ

‘ಕಠಿಣ ಪರಿಶ್ರಮ, ಅಭ್ಯಾಸದಿಂದ ಯಶಸ್ಸು’

Published:
Updated:
Prajavani

ಬಿಡದಿ: ‘ವಿದ್ಯಾರ್ಥಿಗಳು ಪೂರ್ಣ ಮನಸ್ಸಿನಿಂದ ಯಾವುದೇ ಕೆಲಸ ನಿರ್ವಹಿಸಿದರೆ ಅದರಲ್ಲಿ ಯಶಸ್ಸು ಸಾಧಿಸಬಹುದು’ ಎಂದು ರಾಮನಗರ ಜಿಲ್ಲೆಯ ಹಿಂದಿನ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

ಜ್ಞಾನ ವಿಕಾಸ ಪದವಿಪೂರ್ವ ಕಾಲೇಜಿನ ಹೊಸ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಮೊದಲಿಗೆ ಒಂದು ನಿರ್ದಿಷ್ಟ ಗುರಿಯನ್ನು ಹೊಂದಿರಬೇಕು. ಆ ಗುರಿ ಸಾಧಿಸಲು ನಿರಂತರ ಅಭ್ಯಾಸ ಹಾಗೂ ಕಠಿಣ ಪರಿಶ್ರಮದ ಅವಶ್ಯಕತೆಯಿರುತ್ತದೆ. ಕಠಿಣ ಪರಿಶ್ರಮಕ್ಕೆ ಯಾವುದೇ ಬದಲಿ ಮಾರ್ಗವಿಲ್ಲ’ ಎಂದು

‘ವಿದ್ಯಾರ್ಥಿಗಳು ತಮ್ಮನ್ನು ಉನ್ನತ ಸ್ನಾನದಲ್ಲಿ ನೋಡುವುದಕ್ಕೆ ಬಯಸುತ್ತಾರೆ. ಅವರು ಮನನ ಮಾಡಿಕೊಂಡು ವ್ಯಾಸಂಗ ಮಾಡಬೇಕು. ಜತೆಗೆ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಟಿ.ರೂಪ, ಜ್ಞಾನ ವಿಕಾಸ ಪದವಿಪೂರ್ವ ಕಾಲೇಜು ಗುಣಮಟ್ಟದ ಶಿಕ್ಷಣ ನೀಡುತ್ತಿದೆ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಎಂ ಲಿಂಗಪ್ಪ ಅವರು, ಜ್ಞಾನ ವಿಕಾಸ ವಿದ್ಯಾ ಸಂಘ ಹಾಗೂ ಇತರೆ ಶಿಕ್ಷಣ ಸಂಸ್ಥೆಗಳ ಬೆಳವಣಿಗೆಗೆ ದಾನಿ ಜಿ.ಡಿ. ಗೋಯಲ್ ಅವರ ಪಾತ್ರವನ್ನು ಸ್ಮರಿಸಿದರು.

ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಆರಂಭಿಸಿ ತಾಂತ್ರಿಕ ಶಿಕ್ಷಣ ಹಾಗೂ ಸ್ನಾತಕೋತ್ತರ ಪದವಿ ಶಿಕ್ಷಣ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳಿದ್ದು ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಸಾಧಿಸಬೇಕು. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ರೀತಿಯ ಸಮಾರಂಭಗಳಿಗೆ ಸಾಧಕರನ್ನು ಮುಖ್ಯ ಅತಿಥಿಗಳಾಗಿ ಅಹ್ವಾನಿಸುತ್ತೇವೆ ಎಂದು ಹೇಳಿದರು 

ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ತಮ್ಮ ಅನುಭವ ಹಂಚಿಕೊಂಡರು. ಆಡಳಿತ ಮಂಡಳಿಯ ನಿರ್ದೇಶಕ ಎಲ್. ಸತೀಶ್ ಚಂದ್ರ ಅವರು ಗಾಯನದ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದರು.

ಕಾರ್ಯದರ್ಶಿ ಬಿ.ಆರ್. ನಾಗರಾಜು, ಖಜಾಂಚಿ ಬಿ.ಜೆ.ಹೊನ್ನಶೆಟ್ಟಿ, ನಿರ್ದೇಶಕ ಬಿ.ಎನ್ ಗಂಗಾಧರಯ್ಯ, ಪ್ರಾಂಶುಪಾಲ ವೀರಭದ್ರಯ್ಯ ಹಾಗೂ ನಿವೃತ್ತ ಪ್ರಾಂಶುಪಾಲ ಜಿ.ಎಚ್ ರಾಮಯ್ಯ ಇದ್ದರು.

Post Comments (+)