ಬುಧವಾರ, ಸೆಪ್ಟೆಂಬರ್ 29, 2021
20 °C

ಜಿ.ಪಂ. ಚುನಾವಣೆಗೆ ಶಾಸಕರ ಪತ್ನಿ ಅಖಾಡಕ್ಕೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಗಡಿ: ತಾಲ್ಲೂಕಿನ ಕಾಳಾರಿ ಕಾವಲ್ ಜಿಲ್ಲಾ ಪಂಚಾಯಿತಿ ಕ್ಷೇತ್ರ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಶಾಸಕ ಎ. ಮಂಜುನಾಥ್ ಅವರ ಪತ್ನಿ ಲಕ್ಷ್ಮೀ ಮಂಜುನಾಥ್‌ ಅವರನ್ನು ಕಣಕ್ಕಿಳಿಸಲು ಜೆಡಿಎಸ್‌ನಿಂದ ಸಿದ್ಧತೆ ನಡೆದಿದೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಪಕ್ಷದ ವರಿಷ್ಠರ ಮೇಲೆ ಒತ್ತಡ ಹೇರುತ್ತಿದ್ದಾರೆ.

ಕಾರ್ಯಕರ್ತರು ಲಕ್ಷ್ಮೀ ಅವರೇ ಕಾಳಾರಿ ಕಾವಲ್ ಜಿ.ಪಂ. ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಫ್ಲೆಕ್ಸ್‌ ಕೂಡ ಹಾಕಿದ್ದಾರೆ. ಆದರೆ, ಶಾಸಕ ಮಂಜುನಾಥ್ ಅವರು ತಮ್ಮ ಪತ್ನಿಯನ್ನು ಕಣಕ್ಕಿಳಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಆದರೆ, ಕಾರ್ಯಕರ್ತರ ಒತ್ತಡ ಹೆಚ್ಚುತ್ತಿದೆ. ಲಕ್ಷ್ಮೀ ಅವರಿಗೆ ರಾಜಕೀಯ ಹೊಸದೇನಲ್ಲ. ಅವರು ರಾಮನಗರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

‘ಕಾಳಾರಿ ಕಾವಲ್ ಜಿ.ಪಂ. ಹೊಸ ಕ್ಷೇತ್ರವಾಗಿದೆ. ಲಕ್ಷ್ಮೀ ಅವರನ್ನೇ ನಿಲ್ಲಿಸಬೇಕೆಂದು ಕಾರ್ಯಕರ್ತರಿಂದ ಒತ್ತಡ ಕೇಳಿ ಬರುತ್ತಿದೆ. ಅಂತಿಮ ಮೀಸಲಾತಿ ಪಟ್ಟಿ ಪ್ರಕಟಗೊಂಡ ನಂತರ ಕಾರ್ಯಕರ್ತರ ಜೊತೆ ಚರ್ಚಿಸಿ ಸೂಕ್ತ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇವೆ’ ಎಂಬುದು ಶಾಸಕ ಮಂಜುನಾಥ್‌ ಅವರ
ವಿವರಣೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.