ಮಂಗಳವಾರ, ಜುಲೈ 27, 2021
21 °C
ಮಾಸ್ಕ್‌ ಧರಿಸದೆ ಪತ್ನಿಯ ಜನ್ಮ ದಿನ ಆಚರಣೆ

ಕೋವಿಡ್‌ ಮಾರ್ಗಸೂಚಿ ಉಲ್ಲಂಘಿಸಿದ ಸಚಿವ ಯೋಗೇಶ್ವರ್: ಟೀಕೆಗೆ ಗುರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಪಟ್ಟಣ: ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಭಾನುವಾರ ಪಟ್ಟಣದಲ್ಲಿ ತಮ್ಮ ಪತ್ನಿ ಶೀಲಾ ಯೋಗೇಶ್ವರ್ ಅವರ ಹುಟ್ಟುಹಬ್ಬ ಆಚರಣೆ ವೇಳೆ ಸರ್ಕಾರದ ಕೋವಿಡ್‌ ಮಾರ್ಗಸೂಚಿ ಉಲ್ಲಂಘನೆ ಮಾಡಿರುವುದು ಟೀಕೆಗೆ ಗುರಿಯಾಗಿದೆ.

ಪಟ್ಟಣದ ಮಹದೇಶ್ವರನಗರದ ಬಳಿಯ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಗೇಶ್ವರ್ ಸ್ವತಃ ಮಾಸ್ಕ್ ಧರಿಸದೆ, ಅಂತರ ಕಾಪಾಡಿಕೊಳ್ಳದೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಯೋಗೇಶ್ವರ್ ಅವರ ಪತ್ನಿ ಶೀಲಾ ಸಹ ಮಾಸ್ಕ್ ಧರಿಸಿಲ್ಲ. ಹಾಗೆಯೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚನ್ನಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಲವೇಗೌಡ ಸೇರಿದಂತೆ ಯಾವ ಮುಖಂಡರೂ ಮಾಸ್ಕ್ ಧರಿಸಿಲ್ಲ. ಅಂತರ ಕಾಪಾಡಿಕೊಂಡಿಲ್ಲ ಎಂದು ನಾಗರಿಕರು ದೂರಿದ್ದಾರೆ.

ಶೀಲಾ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಕೇಕ್ ಕತ್ತರಿಸಿ ಪತಿ ಯೋಗೇಶ್ವರ್ ಅವರಿಗೆ ತಿನ್ನಿಸಿದ್ದಾರೆ. ಹಾಗೆಯೇ ಯೋಗೇಶ್ವರ್ ಸಹ ಪತ್ನಿಗೆ ಕೇಕ್ ತಿನ್ನಿಸಿದ್ದಾರೆ. ಇಡೀ ಕಾರ್ಯಕ್ರಮದಲ್ಲಿ ಕೊರೊನಾ ನಿಯಮ ಉಲ್ಲಂಘನೆಯಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಸ್ವತಃ ಸಚಿವರಾಗಿದ್ದುಕೊಂಡು ಕೊರೊನಾ ನಿಯಮ ಉಲ್ಲಂಘನೆ ಮಾಡಿರುವ ಯೋಗೇಶ್ವರ್ ಕ್ರಮ ತಾಲ್ಲೂಕಿನಲ್ಲಿ ಟೀಕೆಗೆ ಗುರಿಯಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು