ಚನ್ನಪಟ್ಟಣ: ತಾಲ್ಲೂಕಿನ ಶ್ಯಾನುಭೋಗನಹಳ್ಳಿ ಗ್ರಾಮದ ಜಮೀನುಗಳಿಗೆ ಶುಕ್ರವಾರ ರಾತ್ರಿ ನುಗ್ಗಿದ ಕಾಡಾನೆ ಹಿಂಡೊಂದು ತೆಂಗು, ರಾಗಿ, ಭತ್ತದ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿವೆ.

ಗ್ರಾಮಕ್ಕೆ ನುಗ್ಗಿದ ಎಂಟು ಕಾಡಾನೆಗಳು 14 ತೆಂಗಿನ ಮರ, ಒಂದು ಎಕರೆಯಲ್ಲಿ ಬೆಳೆದಿದ್ದ ರಾಗಿ, ಒಂದು ಎಕರೆ ಭತ್ತದ ಬೆಳೆಯನ್ನು ನಾಶಪಡಿಸಿವೆ.

ತೆಂಗಿನ ಮರಗಳನ್ನು ಉರುಳಿಸಿ ತೆಂಗಿನ ಕಾಯಿಗಳನ್ನು ಕಿತ್ತು ಬಿಸಾಡಿವೆ. ರಾಗಿ ಹಾಗೂ ಭತ್ತದ ಬೆಳೆ ತಿಂದು, ತುಳಿದು ಧ್ವಂಸ ಮಾಡಿವೆ. ₹2 ಲಕ್ಷಕ್ಕೂ ಹೆಚ್ಚು ಮೌಲ್ಯದ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಶಾಶ್ವತವಾಗಿ ಕಾಡಿಗಟ್ಟಬೇಕು. ಬೆಳೆಗಳಿಗೆ ರಕ್ಷಣೆ ನೀಡಬೇಕು. ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು. ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆ ಹಾವಳಿ ನಿಯಂತ್ರಿಸುವತ್ತ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಬೇಕು. ಬೆಳೆನಷ್ಟ ಪರಿಹಾರ ನೀಡಬೇಕು ಎಂದು ಸಂತ್ರಸ್ತ ರೈತರಾದ ಬಸವರಾಜು, ಶಿವಲಿಂಗಯ್ಯ, ದೇಸಯ್ಯ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.