ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡಾನೆ ದಾಳಿಗೆ ತುತ್ತಾಗಿದ್ದ ನಿವೃತ್ತ ಅಧಿಕಾರಿ ಸಾವು

Published 3 ಮಾರ್ಚ್ 2024, 16:15 IST
Last Updated 3 ಮಾರ್ಚ್ 2024, 16:15 IST
ಅಕ್ಷರ ಗಾತ್ರ

ಚನ್ನಪಟ್ಟಣ: ಕಾಡಾನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿವೃತ್ತ ಅಧಿಕಾರಿ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಸಾವನ್ನಪ್ಪಿದ್ದಾರೆ.

ತಾಲ್ಲೂಕಿನ ಬೆಳಕೆರೆ ಗ್ರಾಮದ ಎಂ.ರಾಜು (63) ಮೃತರು. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಮನಗರ ಜಿಲ್ಲಾ ಉಪ ನಿರ್ದೇಶಕರಾಗಿ ಕೆಲಸ ಮಾಡಿ ನಿವೃತ್ತರಾಗಿದ್ದರು. ಸದ್ಯ ತಾಲ್ಲೂಕಿನ ಮತ್ತೀಕೆರೆ ಶೆಟ್ಟಿಹಳ್ಳಿಯಲ್ಲಿ ಕುಟುಂಬಸ ಸಮೇತ ವಾಸವಿದ್ದರು. ಗುರುವಾರ (ಫೆ.29)ರಂದು ಬೆಳಿಗ್ಗೆ ಗ್ರಾಮದಿಂದ ಬೆಳಕೆರೆ ಮಾರ್ಗವಾಗಿ ಮುದಗೆರೆ ಸಸ್ಯ ಕ್ಷೇತ್ರದ ಕಡೆಗೆ ವಾಕಿಂಗ್ ಹೋಗಿದ್ದ ವೇಳೆ ನಾಲ್ಕು ಕಾಡಾನೆಗಳು ಹಠಾತ್ ದಾಳಿ ನಡೆಸಿದ್ದವು. ತಲೆ, ಕಣ್ಣು, ಬಲಗೈ, ಪಕ್ಕೆಲುಬು ಮುರಿದು ಗಂಭೀರವಾಗಿ ಗಾಯಗೊಂಡಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಮುದಗೆರೆ ಬಳಿ ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಸೋಮವಾರ ಬೆಳಿಗ್ಗೆ ಬೆಳಕೆರೆ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT