ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣದಲ್ಲಿ ವಿಚಿತ್ರ ಘಟನೆ: ಲಾರಿ ಚಾಲಕನಿಗೆ ವಿಥೌಟ್ ಹೆಲ್ಮೆಟ್ ದಂಡ!

Last Updated 9 ಫೆಬ್ರುವರಿ 2022, 4:34 IST
ಅಕ್ಷರ ಗಾತ್ರ

ಚನ್ನಪಟ್ಟಣ: ಲಾರಿ ಚಾಲಕರೊಬ್ಬರಿಗೆ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಪುರ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ₹500 ದಂಡ ಹಾಕಿದ ಘಟನೆ ಸೋಮವಾರ ನಡೆದಿದೆ.

ನಗರದ ಬಿ.ಎಂ.ರಸ್ತೆಯಲ್ಲಿ ಸೋಮವಾರ ಸಂಜೆ ಮಂಡ್ಯದಿಂದ ಬಿಡದಿ ಕಡೆಗೆ ಚಲಿಸುತ್ತಿದ್ದ ಲಾರಿಯೊಂದನ್ನು ಅಡ್ಡಹಾಕಿದ ಪುರ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಮಮತಾ ಅವರು, ಲಾರಿ ಚಾಲಕ ಯೋಗಾನಂದ್‌ ಎಂಬುವರಿಗೆ ಹೆಲ್ಮೆಟ್ ಹಾಕಿಲ್ಲ ಎಂಬ ಕಾರಣಕ್ಕೆ ದಂಡ ಹಾಕಿ ರಶೀದಿ ನೀಡಿದ್ದಾರೆ. ರಶೀದಿಯಲ್ಲಿ ವಿಥೌಟ್ ಹೆಲ್ಮೆಟ್ ಎಂದು ನಮೂದಿಸಿ ಸಹಿ ಮಾಡಿ ಸೀಲ್ ಹಾಕಿದ್ದಾರೆ.

ಯೋಗಾನಂದ್‌ ಚಲಾಯಿಸುತ್ತಿದ್ದ ಲಾರಿ ನಂಬರ್ ಬದಲು ರಶೀದಿಯಲ್ಲಿ ಬೇರೆ ಲಾರಿ ನಂಬರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ದಂಡ ಹಾಕಿದ ನಂತರ ಲಾರಿ ಚಾಲಕ ತಲೆಗೆ ಹೆಲ್ಮೆಟ್ ಧರಿಸಿ ಲಾರಿ ಚಲಾಯಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ಬಗ್ಗೆ ಸಬ್ ಇನ್‌ಸ್ಪೆಕ್ಟರ್ ಮಮತಾ ಅವರು ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ್ದು, ಇದು ಕಣ್ತಪ್ಪಿನಿಂದ ಆದ ಪ್ರಮಾದ. ಮುಂದೆ ಇಂತಹ ಪ್ರಮಾದ ಆಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT