ರಾಮನಗರ: ‘ಹಿಂದೆ ಕೇವಲ ಮನೆಗಷ್ಟೇ ಸೀಮಿತವಾಗಿದ್ದ ಮಹಿಳೆ ಇದೀಗ ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬಂದು ತನ್ನ ಸಾಮರ್ಥ್ಯ ಪ್ರದರ್ಶಿಸುತ್ತಿದ್ದಾಳೆ. ಇದು ಮಹಿಳಾ ಸ್ವಾಭಿಮಾನ ಮತ್ತು ಸಬಲೀಕರಣಕ್ಕೆ ಸಾಕ್ಷಿಯಾಗಿದೆ’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್. ಅನಿತಾ ಹೇಳಿದರು.

ನಗರದ ಖೇಲೋ ಇಂಡಿಯಾ ಮಲ್ಲಕಂಬ ತರಬೇತಿ ಕೇಂದ್ರ ಮತ್ತು ಸಾಹಸ ಕಲಾ ಶಿಕ್ಷಣ ಕೇಂದ್ರದ ಬಿ.ವಿ. ಕಾರಂತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಶಿಕ್ಷಣ, ರಾಜಕೀಯ, ಶೈಕ್ಷಣಿಕ, ವಿಜ್ಞಾನ, ಸಾಂಸ್ಕತಿಕ, ಕ್ರೀಡೆ ಸೇರಿದಂತೆ ಪ್ರತಿಯೊಂದು ಕ್ಷೇತ್ರಗಳಲ್ಲೂ ಮಹಿಳೆ ತನ್ನದೇ ಆದ ಛಾಪು ಮೂಡಿಸಿದ್ದಾಳೆ. ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಿರುವ ಭರತನಾಟ್ಯ, ಯೋಗ, ಮಲ್ಲಕಂಬ, ಟೇಕ್ವಾಂಡೊದಲ್ಲಿ ಹೆಣ್ಣು ಮಕ್ಕಳ ಪ್ರದರ್ಶನವೂ ಹೆಣ್ಣಿನ ಸಾಮರ್ಥ್ಯಕ್ಕೆ ಕನ್ನಡಿ ಹಿಡಿದಿದೆ’ ಎಂದರು.

ನಗರಸಭೆ ಸದಸ್ಯೆ ಬಿ.ಸಿ. ಪಾರ್ವತಮ್ಮ ಮಾತನಾಡಿ, ‘ಮಹಿಳೆಯರಿಗೆ ಇಂದು ಎಲ್ಲಾ ಕ್ಷೇತ್ರದಲ್ಲೂ ಪ್ರಾಧಾನ್ಯತೆ
ಸಿಗುತ್ತಿದೆ. ಹೆಣ್ಣುಮಕ್ಕಳು ಮತ್ತಷ್ಟು ಉನ್ನತ ಶಿಕ್ಷಣ ಪಡೆಯಬೇಕು. ತಮ್ಮ ಹಕ್ಕುಗಳ ಬಗ್ಗೆ ಮತ್ತಷ್ಟು ಜಾಗೃತರಾಗಬೇಕು. ತಮಗಿಷ್ಟವಾದ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿ ತಂದೆ–ತಾಯಿಗೆ ಕೀರ್ತಿ ತರಬೇಕು’ ಎಂದು ಸಲಹೆ ನೀಡಿದರು.

ಸಾಹಸ ಕಲಾ ಶಿಕ್ಷಣ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಹಾಸನ ರಘು, ‘ಇಂದು ಮಕ್ಕಳ ಕೈಗೆ ಮೊಬೈಲ್ ಸಿಗುತ್ತಿದೆ. ಹಾಗಾಗಿ, ಕ್ರೀಡೆಗಳಲ್ಲಿ ಮಕ್ಕಳು ಭಾಗವಹಿಸುವುದು ಕಡಿಮೆಯಾಗಿದೆ. ಪೋಷಕರು ಮಕ್ಕಳಿಗೆ ಮೊಬೈಲ್ ನೀಡದೆ ಅವರನ್ನು ಕ್ರೀಡೆ ಸೇರಿದಂತೆ ವಿವಿಧ ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಬೇಕು’ ಎಂದು ಹೇಳಿದರು

ನಗರಸಭೆ ಉಪಾಧ್ಯಕ್ಷೆ ಗಿರಿಜಮ್ಮ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶಾಲಿನಿ ಹಾಗೂ ಪಿ.ಎನ್. ಚಂದನ ಮಹಿಳೆಯರ ಆಹಾರ ಮತ್ತು ಆರೋಗ್ಯದ ಸುರಕ್ಷತೆ ಬಗ್ಗೆ ಮಾಹಿತಿ ನೀಡಿದರು. ಹೆಣ್ಣು ಮಕ್ಕಳಿಂದ ಭರತನಾಟ್ಯ, ಪಟ ಕುಣಿತ, ಕಂಸಾಳೆ ನೃತ್ಯ, ಟೇಕ್ವಾಂಡೊ ಪ್ರದರ್ಶನ ಸೇರಿದಂತೆ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದಲ್ಲಿ ಭಾಗವಹಿಸಿ ಹೆಣ್ಣು ಮಕ್ಕಳಿಗೆ ಟೀ ಶರ್ಟ್ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ರಾಷ್ಟ್ರಮಟ್ಟದ ಮಲ್ಲಕಂಬ ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ತಮ ಸ್ಥಾನ ಗಳಿಸಿದವರಿಗೆ ನಗದು ಬಹುಮಾನ ನೀಡಲಾಯಿತು. ಸಾಹಸ ಕಲಾ ಅಕಾಡೆಮಿಯ ಗೌರವಾಧ್ಯಕ್ಷ ರಾಜಶೇಖರ್, ಸಾಹಸ ಕಲಾ ಶಿಕ್ಷಣದ ಗೌರವ ಅಧ್ಯಕ್ಷ ಪಿ. ರಾಮಾಂಜನೇಯ, ಪ್ರಧಾನ ಕಾರ್ಯದರ್ಶಿ ಪಿ.ಆರ್. ನಾಗರಾಜ್, ತರಬೇತುದಾರರಾದ ಶ್ರೀಶೈಲ ಹೂಗಾರ, ಜೆ. ಬ್ಯಾಡರಹಳ್ಳಿ ಶಿವಕುಮಾರ್ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.