ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆ ಕೊಲೆ ಮಾಡಿ ಚಿನ್ನಾಭರಣ ದೋಚಿದ ಕಳ್ಳರು

Last Updated 11 ಜುಲೈ 2019, 12:10 IST
ಅಕ್ಷರ ಗಾತ್ರ

ರಾಮನಗರ: ತಾಲ್ಲೂಕಿನ ಬಿಳಗುಂಬ ಗ್ರಾಮದಲ್ಲಿ ಬುಧವಾರ ರಾತ್ರಿ ದುಷ್ಕರ್ಮಿಗಳು ಮಹಿಳೆಯೊಬ್ಬರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಚಿನ್ನಾಭರಣ ದೋಚಿದ್ದಾರೆ.

ಗ್ರಾಮದ ಜಯಮ್ಮ (65) ಮೃತರು. ಮನೆಯಲ್ಲಿ ಮಹಿಳೆ ಒಬ್ಬರೇ ವಾಸವಿದ್ದದ್ದನ್ನು ಗಮನಿಸಿದ ಕಳ್ಳರು ಒಳಗೆ ನುಗ್ಗಿ ಮನೆಯಲ್ಲಿನ ಚಿನ್ನಾಭರಣ ದೋಚಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಹಿಳೆಯನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಬೆಳಗ್ಗೆ 10 ಗಂಟೆಯಾದರೂ ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದರು. ರಾಮನಗರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT