ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರ: ತೋಟಕ್ಕೆ ಹೋಗುತ್ತಿದ್ದ ಮಹಿಳೆ‌ ಮೇಲೆ‌ ಕಾಡಾನೆ ದಾಳಿ

Published 1 ಜನವರಿ 2024, 5:42 IST
Last Updated 1 ಜನವರಿ 2024, 5:42 IST
ಅಕ್ಷರ ಗಾತ್ರ

ಕನಕಪುರ (ರಾಮನಗರ): ತೋಟಕ್ಕೆ ಹೋಗುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ್ದರಿಂದ, ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬರಡನಹಳ್ಳಿಯಲ್ಲಿ ಸೋಮವಾರ ನಡೆದಿದೆ.

ಗ್ರಾಮದ ದುಂಡಮ್ಮ (35) ಗಾಯಗೊಂಡರು. ಬೆಳಿಗ್ಗೆ ತೋಟಕ್ಕೆ ಹೋಗುತ್ತಿದ್ದ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಘಟನೆಯಲ್ಲಿ ಅವರ ಎಡಗೈ ಮುರಿದಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಅರಣ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಅವುಗಳಿಗೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT