ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿ ತ್ವರಿತವಾಗಿ ಮುಗಿಸಲು ತಾಕೀತು

ರಾಮನಗರ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಸಭೆ
Last Updated 14 ಆಗಸ್ಟ್ 2020, 3:50 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ನಡೆದಿರುವ ಅಭಿವೃದ್ಧಿಕಾಮಗಾರಿಗಳ ವೇಗ ಹೆಚ್ಚಬೇಕು. ಪೂರ್ವ ನಿಗದಿತ ಸಮ
ಯಕ್ಕೆ ಅವುಗಳ ಪ್ರಯೋಜನ ಜನರಿಗೆ ಲಭ್ಯವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅಧಿಕಾರಿಗಳಿಗೆ ತಾಕೀತು ಮಾಡಿದರು.

ರಾಮನಗರ ಜಿಲ್ಲೆ ಅಭಿವೃದ್ಧಿಗೆ ಕೈಗೊಂಡಿರುವ ವಿವಿಧ ಕಾಮಗಾರಿಗಳ ಪ್ರಗತಿ ಕುರಿತು ಅವರು ಬೆಂಗಳೂರಿನ ವಿಕಾಸಸೌಧದಲ್ಲಿ ಗುರುವಾರ ಅಧಿಕಾರಿಗಳೊಂದಿಗೆ ಅವರು ಸರಣಿ ಸಭೆ ನಡೆಸಿದರು. ರಾಮನಗರದಲ್ಲಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಆಸ್ಪತ್ರೆ ಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ, ಜಿಲ್ಲೆಯ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಯೋಜನೆ, ಒಳಚರಡಿ ಸುಧಾರಣೆ ಸೇರಿ ಜಿಲ್ಲೆಯಲ್ಲಿ ಕಾರ್ಯಗತವಾಗುತ್ತಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಸುಸಜ್ಜಿತ ಆಸ್ಪತ್ರೆ: ಜಿಲ್ಲಾ ಕೇಂದ್ರದಲ್ಲಿ ಈಗ ನಿರ್ಮಾಣ ಆಗುತ್ತಿರುವ 250 ಹಾಸಿಗೆಗಳ ಆಸ್ಪತ್ರೆಯನ್ನು ಜಾಗತಿಕ ಗುಣಮಟ್ಟದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಪರಿವರ್ತಿಸುವ ಕಾಮಗಾರಿ ಪ್ರಗತಿ ಬಗ್ಗೆ ಸಚಿವರು ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ಈ ಆಸ್ಪತ್ರೆಯಲ್ಲಿ ಕ್ಯಾನ್ಸರ್, ಹೃದ್ರೋಗ, ನರರೋಗ ಮೊದಲಾದ ಗಂಭೀರ ಕಾಯಿಲೆಗಳ ರೋಗಿಗಳಿಗೆ ಚಿಕಿತ್ಸೆ ನೀಡಲಾಗುವುದು. ಜತೆಗೆ ಈಗಾಗಲೇ ಜಿಲ್ಲಾ ಕೇಂದ್ರದಲ್ಲಿರುವ 100 ಹಾಸಿಗೆಗಳ ಅಸ್ಪತ್ರೆ ತಾಯಿ-ಮಕ್ಕಳ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲು ಸಭೆ
ಯಲ್ಲಿ ನಿರ್ಧರಿಸಲಾಯಿತು.

ಮಣಿಪಾಲ್ ಆಸ್ಪತ್ರೆ ತಜ್ಞ ವೈದ್ಯರು ಆಸ್ಪತ್ರೆಯ ನಿರ್ಮಾಣಕ್ಕೆ ಸೂಕ್ತ ಸಲಹೆ ನೀಡುತ್ತಿದ್ದು, ಜಾಗತಿಕ ಗುಣಮಟ್ಟಕ್ಕೆ ಯಾವುದೇ ರೀತಿಯಲ್ಲೂ ತಗ್ಗದಂತೆ ಸೌಲಭ್ಯಗಳ ವ್ಯವಸ್ಥೆ ಮಾಡಲಾಗುವುದು. ಮೂರು ತಿಂಗಳ ಅವಧಿಯಲ್ಲಿ ಈ ಆಸ್ಪತ್ರೆ ಕಾಮಗಾರಿ ಮುಗಿಯುತ್ತದೆ. ಈ ಭಾಗದ ಜನರಿಗೆ ಇನ್ನು ಮುಂದೆ ರಾಮನಗರದಲ್ಲಿಯೇ ಜಾಗತಿಕ ಗುಣಮಟ್ಟದ ಚಿಕಿತ್ಸೆ ದೊರೆಯಲಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಇಂಥ ಸುಸಜ್ಜಿತ ಆಸ್ಪತ್ರೆ ಅಗತ್ಯವಾಗಿತ್ತು ಎಂದು ಸಚಿವರು ಹೇಳಿದರು.

ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ನಿಗದಿತ ವೇಳೆಯಲ್ಲೇ ಈ ಆಸ್ಪತ್ರೆಯೂ ಜನರ ಸೇವೆಗೆ ಲಭ್ಯವಾಗು ವಂತೆ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ರಾಮನಗರ ಜಿಲ್ಲಾ ಆರೋಗ್ಯಾಧಿ ಕಾರಿ ಡಾ.ನಿರಂಜನ್, ಜಿಲ್ಲಾ ಸರ್ಜನ್ ಡಾ.ಶಶಿಧರ್, ಜಿಲ್ಲೆಯ ತಜ್ಞ ವೈದ್ಯೆ ಡಾ.ಪದ್ಮಾ ಹಾಗೂ ಮಣಿಪಾಲ ಆಸ್ಪತ್ರೆ ವೈದ್ಯರು ಇದ್ದರು.

ಕುಡಿಯುವ ನೀರಿನ ಯೋಜನೆ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸಲು ಇಗ್ಗಲೂರು ಅಣೆಕಟ್ಟೆಯಿಂದ ಕಣ್ವ, ಮಂಚನಬೆಲೆ ಮತ್ತು ವೈ.ಜಿ.ಗುಡ್ಡ ಜಲಾಶಯಗಳಿಗೆ ನೀರು ತುಂಬಿಸುವ ಕಾಮಗಾರಿ ಪ್ರಗತಿಯನ್ನು ಸಚಿವರು ಇದೇ ಸಂದರ್ಭ ಪರಿಶೀಲನೆ ನಡೆಸಿದರು.

₹540 ಕೋಟಿ ವೆಚ್ಚದಲ್ಲಿ ಕಾರ್ಯಗತವಾಗುತ್ತಿರುವ ಈ ಯೋಜನೆಯೂ ಇದೇ ಡಿಸೆಂಬರ್ ಹೊತ್ತಿಗೆ ಮುಗಿಯಲಿದ್ದು, ಕಾವೇರಿ ನದಿಯಿಂದ ಜಿಲ್ಲೆಗೆ ನೀರು ತರಲಾಗುತ್ತಿದೆ ಎಂದು ತಿಳಿಸಿದರು.

ಇದಾದ ಮೇಲೆ ₹1,800 ಕೋಟಿ ವೆಚ್ಚದಲ್ಲಿ ಮನೆಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ಇದಕ್ಕೆ ಕೇಂದ್ರದ ಒಪ್ಪಿಗೆಪಡೆಯಬೇಕಾಗಿದೆ. ಇನ್ನು ₹311 ಕೋಟಿ ವೆಚ್ಚದಲ್ಲಿ ಜಿಲ್ಲೆಯ ಒಟ್ಟು 2.8 ಲಕ್ಷ ಮನೆಗಳ ಪೈಕಿ ಮೊದಲ ಹಂತದಲ್ಲಿ 75,000 ಮನೆಗಳಿಗೆ ಶುದ್ಧ ನೀರು ಒದಗಿಸುವ ಯೋಜನೆ ಪ್ರಗತಿಯಲ್ಲಿದೆ. ಎಲ್ಲ ಯೋಜನೆಗಳನ್ನು ನಿಗದಿತ ಕಾಲ
ಮಿತಿಯಲ್ಲೇ ಮುಗಿಸಬೇಕುಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಅರ್ಚನಾ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಜಯರಾಂ, ಬೆಂಗಳೂರು ಜಲಮಂಡಳಿ ಮುಖ್ಯ ಎಂಜಿನಿಯರ್ ರಮೇಶ್, ನಗರ ನೀರು ಸರಬರಾಜು ಮಂಡಳಿ ಮುಖ್ಯ ಎಂಜಿನಿಯರ್ ದಿನೇಶ್, ಸಣ್ಣ ನೀರಾವರಿ ಇಲಾಖೆಯ ಮುಖ್ಯ ಎಂಜಿನೀಯರ್ ಶಂಕರೇಗೌಡ, ಗ್ರಾಮೀಣ ನೀರು ಸರಬರಾಜು ಇಲಾಖೆ ಮುಖ್ಯ ಎಂಜಿನಿಯರ್‌ ಬಸಪ್ಪ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT