ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕರ ಪ್ರತಿಭಟನೆ 24ರಂದು

Last Updated 21 ಸೆಪ್ಟೆಂಬರ್ 2020, 15:55 IST
ಅಕ್ಷರ ಗಾತ್ರ

ರಾಮನಗರ: ಅಸಂಘಟಿತ ವಲಯದ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ 24ರಂದು ವಿಧಾನಸೌಧ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ರಾಜ್ಯ ಕಾರ್ಯದರ್ಶಿ ಕೆ.ಎನ್. ಉಮೇಶ್ ತಿಳಿಸಿದರು.

"ಅಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ಆರಂಭಗೊಂಡು ವಿಧಾನಸೌಧ ತಲುಪಲಿದೆ. ಬೆಂಗಳೂರು ನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾರ್ಮಿಕರು ಭಾಗವಹಿಸಲಿದ್ದಾರೆ. ರಾಜ್ಯದ ಉಳಿದ ತಾಲ್ಲೂಕಿನಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಲಿದ್ದಾರೆ’ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

"ಸರ್ಕಾರಗಳು ಬಂಡವಾಳಗಾರರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ಮಾಡುತ್ತಿವೆ. ಕೈಗಾರಿಕಾ ವ್ಯಾಜ್ಯ ಮತ್ತು ಇತರೆ ಕಾಯ್ದೆ ಸುಗ್ರೀವಾಜ್ಞೆಯನ್ನು ಹೊರಡಿಸುವ ಮೂಲಕ ಕೈಗಾರಿಕ ವಿವಾದ ಕಾಯ್ದೆಯ ತಿದ್ದುಪಡಿ ಮಾಡಿ ಲೇ ಆಫ್, ರಿಟ್ರಿಚ್‍ಮೆಂಟ್, ಕ್ಲೋಸರ್ ಮಾಡಲು ಸರ್ಕಾರದ ಅನುಮತಿಗೆ ಇರುವ 100 ಮಂದಿ ಕಾರ್ಮಿಕರ ಮಿತಿಯನ್ನು 300ಕ್ಕೆ ಹೆಚ್ಚಿಸಲಾಗಿದೆ ಎಂದು ದೂರಿದರು.

ಉದ್ಯಮಿಗಳು ಕೋವಿಡ್ ಲಾಕ್‍ಡೌನ್ ಮತ್ತು ಆರ್ಥಿಕ ಹಿಂಜರಿತ ನೆಪದಲ್ಲಿ ಕಾರ್ಮಿಕರಿಗೆ ಲೇ ಆಫ್, ರಿಟ್ರಿಚ್‍ಮೆಂಟ್, ಬಲವಂತದ ವಿಆರ್‍ಎಸ್, ಕೆಲಸದಿಂದ ವಜಾ, ವರ್ಗಾವಣೆ, ವೇತನ ಒಪ್ಪಂದಲ್ಲಿನ ವೇತನ ಹೆಚ್ಚಳ ಮುಂದೂಡಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದರು.

"ಲಾಕ್‍ಡೌನ್ ನಂತರ ದೇಶದಲ್ಲಿ ಸಂಘಟಿತ ಹಾಗೂ ಅಸಂಘಟಿತ ವಲಯದ 14 ಕೋಟಿ ಕಾರ್ಮಿಕರಿಗೆ ಉದ್ಯೋಗ ಇಲ್ಲದಂತೆ ಆಗಿದೆ. ನಿರುದ್ಯೋಗ ಮತ್ತಷ್ಟು ತೀವ್ರಗೊಳ್ಳುತ್ತಿದೆ. ಜನರ ಆದಾಯ ಕುಸಿಯುತ್ತಿದ್ದು, ಜೀವನ ಭದ್ರತೆಗಳು ದುರ್ಬಲಗೊಳ್ಳುತ್ತಿದ್ದು, ಅರೋಗ್ಯ ಮತ್ತು ಶಿಕ್ಷಣ ದುಬಾರಿಯಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೇಡಿಕೆಗಳು: ಕೆಲಸದ ಅವಧಿ ಹೆಚ್ಚಳ, ವಾರದ ಕೆಲಸದ ಮಿತಿ ಹೆಚ್ಚಳ, ಕಾರ್ಮಿಕ ಕಾಯ್ದೆಯ ಪರಿಭಾಷೆಗೆ ತಿದ್ದುಪಡಿ, ಕೈಗಾರಿಕಾ ಕಾಯ್ದೆ ಅಧ್ಯಾಯ 5 ಬಿಗೆ ತಿದ್ದುಪಡಿ ಹಾಗೂ ಗುತ್ತಿಗೆ ಕಾರ್ಮಿಕರ ನೇಮಕಾರಿಗೆ ಪರವಾನಗಿ ಮಿತಿ 20ರಿಂದ 50ಕ್ಕೆ ಹೆಚ್ಚಳ ತಿದ್ದುಪಡಿಗಳ ಸುಗ್ರೀವಾಜ್ಞೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಪದಾಧಿಕಾರಿಗಳಾದ ಬಿ.ಬಿ. ರಾಘವೇಂದ್ರ, ಯೋಗೇಶ್ ಎಂ, ಎಂ.ಬಿ. ಮಹಾಂತೇಶ್, ಡಿ.ಚಂದ್ರಶೇಖರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT