ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡದಿ: ಶಾಸಕರ ಬೆಂಬಲ ಕೋರಿದ ಕಾರ್ಮಿಕರು

ಮಂಜುನಾಥ್‌ರನ್ನು ಭೇಟಿ ಮಾಡಿದ ಟೊಯೊಟಾ ಕಾರ್ಮಿಕರ ನಿಯೋಗ
Last Updated 30 ನವೆಂಬರ್ 2020, 2:02 IST
ಅಕ್ಷರ ಗಾತ್ರ

ಬಿಡದಿ: ಟೊಯೊಟಾ ಕಿರ್ಲೋಸ್ಕರ್‌ ಮೋಟಾರ್ಸ್‌ ಆಡಳಿತ ಮಂಡಳಿಯ ವಿರುದ್ಧ ನಡೆಸುತ್ತಿರುವ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಕಾರ್ಖಾನೆಯ ಕಾರ್ಮಿಕರು ಭಾನುವಾರ ಶಾಸಕ ಮಂಜುನಾಥ್ ಅವರಿಗೆ ಆಹ್ವಾನ ನೀಡಿದ್ದಾರೆ.

ಶಾಸಕರನ್ನು ಭೇಟಿ ಮಾಡಿದ ಕಾರ್ಮಿಕರು ಮತ್ತು ನೌಕರರ ನಿಯೋಗವು ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿ, ಹೋರಾಟದಲ್ಲಿ ಪಾಲ್ಗೊಳ್ಳಲು ತಮ್ಮ ಜೊತೆ ಬರುವಂತೆ ಪಟ್ಟು ಹಿಡಿಯಿತು.

‘ಈಗಾಗಲೇ ಶಾಸಕರಾದ ಸುರೇಶ್ ಗೌಡ, ಅನ್ನದಾನಿ ಹಾಗೂ ವಿವಿಧ ಸಂಘಟನೆ, ಸಂಘ, ಸಂಸ್ಥೆಗಳ ಮುಖಂಡರು ನಮ್ಮ ಹೋರಾಟವನ್ನು ಬೆಂಬಲಿಸಿ ಮುಷ್ಕರದಲ್ಲಿ ಭಾಗವಹಿಸಿದ್ದಾರೆ. ಆದರೆ ಸಮಸ್ಯೆ ಮಾತ್ರ ಬಗೆಹರಿದಿಲ್ಲ’ ಎಂದು ಕಾರ್ಮಿಕರು ಅಳಲು ತೋಡಿಕೊಂಡರು.

ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ ಶಾಸಕರು, ‘ನಾನು ನಿಮ್ಮ ಜೊತೆ ಇರುತ್ತೇನೆ. ಈ ನಿಮ್ಮ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದು ಭರವಸೆ ನೀಡಿದರು.

‘ಮಂಗಳವಾರ ಹಲವು ಮುಖಂಡರ ಜತೆ ಚರ್ಚಿಸುತ್ತೇನೆ. ನಿಮ್ಮ ಸಮಸ್ಯೆ, ಬೇಡಿಕೆಗಳ ಪಟ್ಟಿ ಕೊಡಿ. ಕಾರ್ಮಿಕರನ್ನು ಮರಳಿ ಕೆಲಸಕ್ಕೆ ಸೇರಿಸಲು ಪ್ರಯತ್ನಿಸುತ್ತೇನೆ’ ಎಂದು ಕಾರ್ಮಿಕರ ನಿಯೋಗಕ್ಕೆ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT