ಶುಕ್ರವಾರ, ಸೆಪ್ಟೆಂಬರ್ 24, 2021
21 °C

ಕೃತಿ ಬಿಡುಗಡೆ, ವಿಚಾರ ಸಂಕಿರಣ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಕರ್ನಾಟಕ ಅಧ್ಯಯನ ಕೇಂದ್ರ ಹಾಗೂ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಪುಸ್ತಕ ಬಿಡುಗಡೆ ಹಾಗೂ ವಿಚಾರಗೋಷ್ಠಿ ಕಾರ್ಯಕ್ರಮ ಇದೇ 12ರಂದು ಬೆಳಿಗ್ಗೆ 10.30ಕ್ಕೆ ಕನಕಪುರ ವೃತ್ತದಲ್ಲಿರುವ ಶಾಂತಿನಿಕೇತನ ಪಿ.ಯು. ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಬಂಜಗೆರೆ ಜಯಪ್ರಕಾಶ್‌ ಅನುವಾದಿಸಿರುವ ‘ಮೈಸೂರು ಸಂಸ್ಥಾನದ ದನದ ತಳಿಗಳು’ ಕೃತಿಯನ್ನು ರೈತ ಸಂಘದ ರಾಜ್ಯ ಉಪಾಧ್ಯಕ್ಷೆ ಅನಸೂಯಮ್ಮ ಬಿಡುಗಡೆ ಮಾಡಲಿದ್ದಾರೆ. ಇತಿಹಾಸ ಉಪನ್ಯಾಸಕ ಚಿಕ್ಕಚನ್ನಯ್ಯ ಕೃತಿ ಕುರಿತು ಮಾತನಾಡಲಿದ್ದಾರೆ. ಶಾಂತಿನಿಕೇತನ ಸಂಸ್ಥೆಯ ಕಾರ್ಯದರ್ಶಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.

ಇದೇ ಸಂದರ್ಭದಲ್ಲಿ ವಿಚಾರಗೋಷ್ಠಿ ನಡೆಯಲಿದ್ದು, ‘ರಾಮನಗರ ಜಿಲ್ಲೆಯಾಗಿ 15 ವರ್ಷಗಳು ಮತ್ತು ನಿರೀಕ್ಷೆಗಳು’ ಕುರಿತು ಲೇಖಕ ಪಾರ್ವತೀಶ ಬಿಳಿದಾಳೆ ಮಾತನಾಡಲಿದ್ದಾರೆ. ಅರ್ಕಾವತಿ ನದಿಯ ಸ್ಥಿತಿಗತಿ ಕುರಿತು ಕಾಂತರಾಜ ಪಟೇಲ್‌ ವಿಚಾರ ಮಂಡಿಸಲಿದ್ದಾರೆ. ಇತಿಹಾಸಕಾರ ಮುನಿರಾಜಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು