ಚನ್ನಪಟ್ಟಣ: ತಾಲ್ಲೂಕಿನ ಬೆಳಕೆರೆ ಬಳಿಯ ಸಂಪೂರ್ಣ ಕೃಷಿ ಮತ್ತು ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಶನಿವಾರ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಹೆಚ್ಚಿಸುವ ಕುರಿತ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮತ್ತು ಚಿಂತನೆ ಸಾಮರ್ಥ್ಯ ಹೆಚ್ಚಿಸುವುದು ಅವಶ್ಯಕ. ವಿದ್ಯಾರ್ಥಿಗಳ ಸೃಜನಶೀಲತೆ ಉತ್ತೇಜಿಸಲು ಬೌದ್ಧಿಕ ಆಸ್ತಿ ಹಕ್ಕುಗಳು (ಐಪಿಆರ್) ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷೆ ಡಾ.ಸಂಪೂರ್ಣ ನಾಯ್ಡು ಅಭಿಪ್ರಾಯಪಟ್ಟರು.

ಬೌದ್ಧಿಕ ಆಸ್ತಿ ಹಕ್ಕುಗಳ ಕುರಿತು ತಿಳಿವಳಿಕೆ, ಹೊಸ ಸೃಷ್ಟಿ, ಕಾನೂನು ರಕ್ಷಣೆ ಮತ್ತಷ್ಟು ಆವಿಷ್ಕಾರ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಕೌನ್ಸಿಲ್ ಕಾರ್ಯಕಾರಿ ಸಮಿತಿ ಕಾರ್ಯದರ್ಶಿ ಡಾ.ಯು.ಟಿ. ವಿಜಯ್ ಹೇಳಿದರು.

ಕಾಲೇಜು ಮುಖ್ಯಸ್ಥ ಎಸ್.ವಿ. ವಾಸುದೇವನ್, ಪ್ರಾಂಶುಪಾಲ ವಿನಯ್ ಬಿ.ರಾಘವೇಂದ್ರ, ಸಲಹೆಗಾರರಾದ ಸರಸಿಜ ಪದ್ಮನಾಭನ್, ಪ್ರಾಜೆಕ್ಟ್ ಎಂಜಿನಿಯರ್ ವಿನೀತ್ ಕುಮಾರ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.