ಶನಿವಾರ, ಜನವರಿ 18, 2020
20 °C

ಯೇಸು ಪ್ರತಿಮೆ ನಿರ್ಮಾಣ ವಿರೋಧಿಸಿ ಬಿಜೆಪಿ ಪ್ರತಿಭಟನೆ 13ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿರೋಧಿಸಿ ಬಿಜೆಪಿಯು ಸಮಾನ ಮನಸ್ಕ ಸಂಘಟನೆಗಳ ಜೊತೆಗೂಡಿ ಇದೇ 13ರಂದು ಕನಕಪುರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ ಎಂದು ಪಕ್ಷದ ಮುಖಂಡ ಸಿ.ಪಿ. ಯೋಗೇಶ್ವರ್‌ ತಿಳಿಸಿದರು.

ನಗರದಲ್ಲಿ ಶನಿವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಕಪಾಲ ಬೆಟ್ಟ ಅರಣ್ಯ ಪ್ರದೇಶದಲ್ಲಿ ಇದೆ. ಅದೊಂದು ಗೋಮಾಳ. ಅಲ್ಲಿ ಅನಧಿಕೃತವಾಗಿ ಯೇಸು ಪ್ರತಿಮೆ ನಿರ್ಮಾಣ ಆಗುತ್ತಿರುವುದು ತಪ್ಪು. ಇದನ್ನು ಖಂಡಿಸಿ ಶಾಂತಿಯುತ ಪ್ರತಿಭಟನೆ ನಡೆಯಲಿದೆ. ಅಂದು ಬೆಟ್ಟಕ್ಕೂ ತೆರಳಿ ಪ್ರತಿಭಟನೆ ನಡೆಸಲಾಗುವುದು’ ಎಂದರು.

ಪ್ರತಿಕ್ರಿಯಿಸಿ (+)