ಬುಧವಾರ, ಜುಲೈ 6, 2022
21 °C

ಎರಡು ದಿನಗಳ ನಂತರ ಯುವಕನ ಮೃತದೇಹ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಹಂಪಿಯ ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕನ ಶವ ಎರಡು ದಿನಗಳ ನಂತರ ಪತ್ತೆಯಾಗಿದೆ.

ಹೈದರಾಬಾದಿನ ಕಿರಣ್‌ (25) ತನ್ನ ಗೆಳೆಯರೊಂದಿಗೆ ಹುಲಿಗಿ ಜಾತ್ರೆ ಮುಗಿಸಿಕೊಂಡು ಬುಧವಾರ ಹಂಪಿಗೆ ಬಂದಿದ್ದರು. ತುಂಗಭದ್ರಾ ನದಿಯಲ್ಲಿ ಈಜಾಡುತ್ತಿದ್ದಾಗ ನಾಪತ್ತೆಯಾಗಿದ್ದರು. ವಿಷಯ ತಿಳಿದು, ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಶೋಧ ಕಾರ್ಯದಲ್ಲಿ ತೊಡಗಿದ್ದರು.

ಗುರುವಾರ ಮೃತ ದೇಹ ಪತ್ತೆಯಾಗಿದೆ. ನದಿಯಿಂದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು. ಮೃತದೇಹ ನೋಡಿದ ಗೆಳೆಯರ ಆಕ್ರಂದನ ಮುಗಿಲು ಮುಟ್ಟಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು