ಭಾನುವಾರ, ಆಗಸ್ಟ್ 14, 2022
28 °C

ಬಿಡದಿ: ಇಂಧನ ಬೆಲೆ ಹೆಚ್ಚಳ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಿಡದಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬೆಲೆ ಹೆಚ್ಚಳ ಮಾಡಿ ಜನರ ಜೇಬಿಗೆ ಕತ್ತರಿ ಹಾಕುತ್ತಿರುವುದನ್ನು ಖಂಡಿಸಿ ಶುಕ್ರವಾರ ಬಿಡದಿಯ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್‌ ಮುಂಭಾಗ ವಿಧಾನ ಪರಿಷತ್ ಸದಸ್ಯ ಸಿ.ಎಂ ಲಿಂಗಪ್ಪ ಹಾಗೂ ಕಾಂಗ್ರೆಸ್  ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸರ್ಕಾರ ಲಾಕ್‌ಡೌನ್ ಘೋಷಿಸಿದ್ದು, ಜನಸಾಮಾನ್ಯರ ಮೇಲೆ ಬರೆ ಎಳೆಯುತ್ತಿದೆ. ಊಟಕ್ಕೂ ಪರದಾಡುವ ಸ್ಥಿತಿಯಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ಅಡುಗೆ ಎಣ್ಣೆ ಸಹಿತ ಅಗತ್ಯ ವಸ್ತುಗಳ ಮೇಲೆ ಬರೆಹಾಕುತ್ತಿರುವುದು ಎಷ್ಟು ಸರಿ ಎಂದು ಮಾಜಿ ಶಾಸಕ ಎಚ್.ಸಿ ಬಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್ ಸಂದರ್ಭದಲ್ಲಿ ರೈತರು ಬೆಳೆದ ಬೆಳೆಗಳಿಗೆ ಬೆಲೆ ಇಲ್ಲದಾಗಿದೆ. ಇಂತಹ ಕಷ್ಟದ ಸಂದರ್ಭದಲ್ಲಿ ರೈತರು ಬೇಸಾಯ ಮಾಡಲು ಉಪಯೋಗಿಸುವ ಟ್ರ್ಯಾಕ್ಟರ್‌ಗಳಿಗೆ ಡೀಸೆಲ್ ದರ ಹೆಚ್ಚಿಸಿರುವುದು ಮೂರ್ಖತನ ಎಂದು ಕಿಡಿಕಾರಿದರು.

ಬಿಡದಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಾಣಕಲ್ ನಟರಾಜ್, ರೈತ ಸೇವಾ ಸಹಕಾರ ಸಂಘದ ಎಚ್.ಎಲ್ ಚಂದ್ರಶೇಖರ್, ಸಿ.ಉಮೇಶ್, ಹೊನಶೆಟ್ಟಿ, ಭದ್ರಯ್ಯ, ಜೀವನ್ ಬಾಬು, ಯುವ ಕಾಂಗ್ರೆಸ್ ಘಟಕದ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು