ಭಾನುವಾರ, ಡಿಸೆಂಬರ್ 6, 2020
19 °C
ಮಾಗಡಿ ಪೊಲೀಸರಿಂದ ಬಂಧನ: ಚಿನ್ನಾಭರಣ, ವಾಹನ ವಶ

ರಾಮನಗರ: ಷೋಕಿಗಾಗಿ ಕಳ್ಳತನಕ್ಕೆ ಇಳಿದ ಯುವಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಐಷಾರಾಮಿ ಬದುಕಿಗಾಗಿ ಕಳ್ಳತನಕ್ಕೆ ಇಳಿದಿದ್ದ ಉದಯ್ ಕುಮಾರ್ (25) ಎಂಬಾತನನ್ನು ಮಾಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಾಗಡಿ ಠಾಣಾ ವ್ಯಾಪ್ತಿಯಲ್ಲಿ ಕಳೆದ ಮಾರ್ಚ್‌ 3ರಂದು ಹರ್ತಿ ಗ್ರಾಮದ ರೇಣುಕಯ್ಯ ಎಂಬುವರ ಮನೆಯ ಬೀಗ ಒಡೆದು, 1.2 ಲಕ್ಷ ಬೆಳೆ ಬಾಳುವ ಚಿನ್ನಾಭಾರಣ ಕಳವು ಮಾಡಲಾಗಿತ್ತು. ಇದೇ ಮಾದರಿಯಲ್ಲಿ ತಾವರೆಕೆರೆ ವ್ಯಾಪ್ತಿಯಲ್ಲೂ ಪ್ರಕರಣ ನಡೆದಿತ್ತು. ಆರೋಪಿ ಬಂಧನಕ್ಕಾಗಿ ವಿಶೇಷ ತಂಡ ರಚನೆ ಮಾಡಲಾಗಿತ್ತು. ಮಾಗಡಿ ಠಾಣಾ ವ್ಯಾಪ್ತಿಯಲ್ಲಿ 2 ಪ್ರಕರಣ ತುಮಕೂರು ಹಾಗೂ ಮಂಡ್ಯ ಜಿಲ್ಲೆಯಲ್ಲಿ 15 ಕಳ್ಳತನ ಪ್ರಕರಣಗಳಲ್ಲಿ ಆತ ಭಾಗಿಯಾಗಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನೂಪ್‌ ಶೆಟ್ಟಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಆರೋಪಿ ಐಷಾರಾಮಿ ಜೀವನ ಸಾಗಿಸುವ ಸಲುವಾಗಿ ಒಂಟಿ ಮನೆಯನ್ನು ಟಾರ್ಗೆಟ್ ಮಾಡಿ ಹಗಲು ಸಮಯದಲ್ಲಿಯೇ ಕಳ್ಳತನ ಮಾಡುತ್ತಿದ್ದ. ಈ ಹಿಂದೆ ತುಮಕೂರು ಜಿಲ್ಲೆಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹದಲ್ಲಿದ್ದು 2019ರಲ್ಲಿ ಜಾಮೀನು ಪಡೆದುಕೊಂಡಿದ್ದ. ಪ್ರಸ್ತುತ ಬೆಂಗಳೂರಿನ ಕೆ.ಆರ್.ಪುರಂನ ನಿವಾಸಿಯಾಗಿರುವ ಈತ, ಹಾಸನ ಜಿಲ್ಲೆಯ ಚನ್ನರಾಯಪಟ್ಟಣದವನು. ಕೂಲಿ ಕೆಲಸ ಮತ್ತು ಬೆಡ್‍ಶೀಟ್‌ ವ್ಯಾಪಾರ ಮಾಡುತ್ತಿದ್ದ ಎಂದು ಮಾಹಿತಿ ನೀಡಿದರು.
ಆರೋಪಿಯಿಂದ 25 ಲಕ್ಷ ಬೆಲೆ ಬಾಳುವ 560 ಗ್ರಾಂ ಚಿನ್ನಾಭಾರಣ ಹಾಗೂ ಮೂರು ಕೆ.ಜಿ ಬೆಳ್ಳಿ ಸಾಮಗ್ರಿ, ಕಾರ್‌ ಹಾಗೂ ಎರಡು ದ್ವಿಚಕ್ರ ವಾಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಆರೋಪಿಯ ಪತ್ತೆಗಾಗಿ ಮಾಗಡಿ ಡಿವೈಎಸ್ಪಿ ಓಂಪ್ರಕಾಶ್, ವೃತ್ತ ಸರ್ಕಲ್‌ ಇನ್‌ಸ್ಪೆಕ್ಟರ್‌ ಮಂಜುನಾಥ್, ಎಸ್‍ಐ ವೆಂಕಟೇಶ್, ಸಿಬ್ಬಂದಿಯಾದ ಬೀರಪ್ಪ, ಮಂಜುನಾಥ್, ನಾಗರಾಜು ಒಳಗೊಂಡ ವಿಶೇಷ ತಂಡ ರಚನೆ ಮಾಡಲಾಗಿತ್ತು ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.