ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಯುವತಿ ಕೂರಿಸಿಕೊಂಡು ಯುವಕನ ವಿಲೇ

ಬಿಡದಿ ಠಾಣೆ ವ್ಯಾಪ್ತಿಯಲ್ಲಿ ಘಟನೆ
Published 25 ನವೆಂಬರ್ 2023, 15:23 IST
Last Updated 25 ನವೆಂಬರ್ 2023, 15:23 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯ ಬಿಡದಿ ಬಳಿಯ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಯುವಕನೊಬ್ಬ ಸ್ಕೂಟರ್‌ನಲ್ಲಿ ಯುವತಿಯನ್ನು ಕೂರಿಸಿಕೊಂಡು ವಿಲೇ ಮಾಡಿದ್ದಾನೆ. ಈ ದೃಶ್ಯವು ಸಾಮಾಜಿಕ ಜಾಲತಾಣ ವಾಟ್ಸ್‌ಆ್ಯಪ್ ಮತ್ತು ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿದೆ.

ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಆದರೂ, ಯುವಕ ಹೆದ್ದಾರಿ ಪ್ರವೇಶಿಸಿದ್ದಾನೆ. ಚಾಲನೆ ಸಂದರ್ಧದಲ್ಲಿ ಹೆಲ್ಮೆಟ್ ಕೂಡ ಹಾಕದ ಆತ, ಬಿಡದಿಯ ಸೇತುವೆ ಬಳಿ ವಿಲೇ ಮಾಡಿದ್ದಾನೆ.

ವಿಲೇ ಮಾಡಿರುವ ಸ್ಕೂಟರ್‌ನ ನಂಬರ್ ಆಧರಿಸಿ, ಯುವಕನನ್ನು ಪತ್ತೆ ಹಚ್ಚಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಡದಿ ಠಾಣೆ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT