ರಾಮನಗರ: 2022-23 ಮತ್ತು 2023-24ನೇ ಸಾಲಿನಲ್ಲಿ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ಸಿಗದವರು ಯುವನಿಧಿ ಯೋಜನೆಯಡಿ ಮಾಸಿಕ ನಿರುದ್ಯೋಗಿ ಭತ್ಯೆ ಪಡೆಯಲು https://sevasindhugs.karnataka.gov.in ಸೇವಾಸಿಂಧು ವೆಬ್ ಪೋರ್ಟಲ್ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಜ. 20ರವರೆಗೆ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಯೋಜನೆಯಡಿ ಪದವೀಧರರಿಗೆ ಪ್ರತಿ ತಿಂಗಳು ₹ ಸಾವಿರ ಹಾಗೂ ಡಿಪ್ಲೋಮಾ ಉತ್ತೀರ್ಣರಾದವರಿಗೆ ₹1,500 ನಿರುದ್ಯೋಗಿ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷದವರೆಗೆ ನೀಡಲಾಗುತ್ತದೆ. ಫಲಿತಾಂಶದ ನಂತರ ಹೆಸರನ್ನು ನೋಂದಾಯಿಸಿಕೊಂಡ ಅಭ್ಯರ್ಥಿಗಳು ನಿರುದ್ಯೋಗಿಗಳಾಗಿ 180 ದಿನಗಳನ್ನು ಪೂರೈಸಿ ನಂತರವೂ ನಿರುದ್ಯೋಗಿಗಳಾಗಿದ್ದಲ್ಲಿ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ.

ಪ್ರತಿ ತಿಂಗಳು ಯುವನಿಧಿ ಯೋಜನೆಯ ಪ್ರಯೋಜನ ಪಡೆಯಬೇಕಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಪ್ರತಿ ತಿಂಗಳು ತಾನು ನಿರುದ್ಯೋಗಿ ಎಂದು ಉನ್ನತ ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿ ಅಲ್ಲವೆಂದು ಪ್ರತಿ ತಿಂಗಳ 25ನೇ ತಾರೀಖಿನೊಳಗಾಗಿ ಸ್ವಯಂ ಘೋಷಣೆ ಮಾಡುವುದು ಕಡ್ಡಾಯವಾಗಿದೆ.

ಅಭ್ಯರ್ಥಿಗಳು ಕರ್ನಾಟಕ ಒನ್/ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯೋಜನೆಗೆ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವಾಗ ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆ ಹಾಗೂ ಆಧಾರ್ ಲಿಂಕ್ಡ್ ಮೊಬೈಲ್ ಸಂಖ್ಯೆ ಹೊಂದಿರಬೇಕು. ಅರ್ಜಿ ಸಲ್ಲಿಸಿದ ನಂತರ ಪೋರ್ಟಲ್ನಲ್ಲಿ ತಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಿಕೊಳ್ಳಬಹುದು.

ಒಂದು ವೇಳೆ ಅರ್ಜಿಯು ಅನುಮೋದನೆ ಆಗದಿದ್ದಲ್ಲಿ ಸಂಬಂಧಿಸಿದ ಇಲಾಖೆಯ ಕಚೇರಿಗಳಿಗೆ ತಮ್ಮ ಎಲ್ಲಾ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಅನುಮೋದನೆ ಮಾಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರಾಮನಗರ ದೂ: 080-27273364 ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.