ಸೊರಬ ಮುಖ್ಯರಸ್ತೆ ವಿಸ್ತರಣೆಗೆ ಶೀಘ್ರ ಚಾಲನೆ: ಕುಮಾರ್ ಬಂಗಾರಪ್ಪ

ಸೊರಬ: ಪಟ್ಟಣದ ಮುಖ್ಯ ರಸ್ತೆ ವಿಸ್ತರಣೆಗೆ ಇದ್ದ ಕಾನೂನು ತೊಡಕು ನಿವಾರಣೆ ಆಗಿ, ಎಲ್ಲ ಹಂತದ ಪ್ರಕ್ರಿಯೆ ಮುಗಿದಿದೆ. ವಾರದೊಳಗೆ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಕುಮಾರ್ ಬಂಗಾರಪ್ಪ ತಿಳಿಸಿದರು.
ಪಟ್ಟಣದಲ್ಲಿ ಕೆಲ ದಿನಗಳ ಹಿಂದೆ ಕಂಡುಬಂದಿದ್ದ ಡೆಂಗಿ ಪ್ರಕರಣದ ಹಿನ್ನೆಲೆಯಲ್ಲಿ ಭಾನುವಾರ ಎಲ್ಲ ವಾರ್ಡ್ಗಳ ಸ್ವಚ್ಛತೆ ಪರಿಶೀಲನೆ ನಡೆಸಿ, ನಂತರ ಪಟ್ಟಣದ ಅಪೂರ್ಣಗೊಂಡ ಕಾಮಗಾರಿಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.
ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಪಟ್ಟಣದ ಮುಖ್ಯ ರಸ್ತೆ ವಿಸ್ತರಣೆಗೆ ಕಾಲ ಕೂಡಿ ಬಂದಿದೆ. ನಿವಾಸಿಗಳು ಹಾಗೂ ವರ್ತಕರಿಗೆ ಸರಕುಗಳನ್ನು ಎತ್ತಿಟ್ಟುಕೊಳ್ಳುವಂತೆ ಧ್ವನಿವರ್ಧಕದ ಮೂಲಕ ಪ್ರಚಾರ ಮಾಡಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.
ರಂಗನಾಥಸ್ವಾಮಿ ದೇವಸ್ಥಾನದ ಸಮುದಾಯ ಭವನದ ಅರ್ಪೂಣಗೊಂಡ ಕಾಮಗಾರಿ ಪರಿಶೀಲಿಸಿದರು. ಮಾಹಿತಿ ಪಡೆದ ಅವರು, ಕಾಮಗಾರಿಗೆ ಬೇಕಾಗಿರುವ ಅನುದಾನದ ಬಗ್ಗೆ ಕೂಡಲೇ ಅಂದಾಜು ವೆಚ್ಚ ತಯಾರಿಸಿ ಕೆಲಸ ಪೂರ್ಣಗೊಳಿಸಬೇಕು ಎಂದು ಲೋಕೋಪಯೋಗಿ ಎಂಜಿನಿಯರ್ಗೆ ಸೂಚನೆ ನೀಡಿದರು.
ಪಟ್ಟಣದಲ್ಲಿನ ಎಸ್.ಬಂಗಾರಪ್ಪ ಕ್ರೀಡಾಂಗಣ ಹಾಗೂ ರುದ್ರಭೂಮಿಗಳ ಅವ್ಯವಸ್ಥೆ ಪರಿಶೀಲಿಸಿ, ಕ್ರೀಡಾಂಗಣದ ಅಭಿವೃದ್ಧಿಗೆ ಬೇಕಾಗಿರುವ ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಪಟ್ಟಣದ ಎಲ್ಲ 11 ವಾರ್ಡ್ಗಳಿಗೂ ಭೇಟಿ ನೀಡಿ ರಸ್ತೆ, ಚರಂಡಿ, ಮೋರಿಗಳನ್ನು ಸ್ವಚ್ಛವಾಗಿಡುವಂತೆ ಹಾಗೂ ಮೂಲಸೌಲಭ್ಯಗಳಿಗೆ ಆದ್ಯತೆ ನೀಡುವಂತೆ ಪಟ್ಟಣ ಪಂಚಾಯಿತಿ ಅಧಿಕಾರಿ ಬಾಲಚಂದ್ರಪ್ಪ ಅವರಿಗೆ ಸೂಚಿಸಿದರು.
ಸಂತೆ ಹಾಗೂ ಮೀನು, ಮಾಂಸ ಮಾರುಕಟ್ಟೆಗಳ ಅವ್ಯವಸ್ಥೆಗಳನ್ನು ಪರಿಶೀಲಿಸಿದ ಶಾಸಕರು, ಸರಿಯಾಗಿ ನಿರ್ವಹಣೆ ಮಾಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಬೀಬಿ ಜುಲೇಖಾ, ಸದಸ್ಯರಾದ ಎಂ.ಡಿ.ಉಮೇಶ್, ಮಹೇಶಗೌಳಿ, ಶಿವಯೋಗಿ, ಯೋಗೇಶ್, ಶ್ರೀಪಾದ ಹೆಗಡೆ ನಿಸರಾಣಿ, ಬೆನವಪ್ಪ, ಸಮೀವುಲ್ಲಾ,ಗೌರಮ್ಮ ಭಂಡಾರಿ, ವಿವಿಧ ಇಲಾಖಾಧಿಕಾರಿಗಳು ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.