ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಗೆ ಕಳುಹಿಸದಿದ್ದರೆ ಪಡಿತರ ಕಾರ್ಡ್ ರದ್ದು!

ಯುವ ಸಂಸತ್ (ಅಣಕು) ಕಾರ್ಯಕ್ರಮದಲ್ಲಿ ಮಕ್ಕಳು ಒಕ್ಕೊರಲ ಅಭಿಮತ
Last Updated 14 ಡಿಸೆಂಬರ್ 2019, 9:59 IST
ಅಕ್ಷರ ಗಾತ್ರ

ಶಿವಮೊಗ್ಗ: ಶಾಲಾಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆಯಾಗಬೇಕು.ಶಾಲೆಗೆ ಮಕ್ಕಳನ್ನು ಕಳುಹಿಸದ ಕುಟುಂಬದ ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸಬೇಕು.

–ಇದುಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಯುವ ಸಂಸತ್ (ಅಣಕು) ಕಾರ್ಯಕ್ರಮದಲ್ಲಿಮಕ್ಕಳು ಒಕ್ಕೊರಲಿನಿಂದ ಆಗ್ರಹಿಸಿದ ಪರಿ.

ಪಠ್ಯಪುಸ್ತಕ ಸರಿಯಾದ ಸಮಯಕ್ಕೆ ತಲುಪುತ್ತಿಲ್ಲ, ಸರ್ಕಾರ ಹಲವು ಯೋಜನೆಗಳನ್ನುಜಾರಿಗೆ ತಂದರೂ ಮಕ್ಕಳು ಶಾಲೆಗೆ ಬರುತ್ತಿಲ್ಲ.ಪಠ್ಯಪುಸ್ತಕ ವಿಳಂಬದ ಕಾರಣ ವಿದ್ಯಾರ್ಥಿಗಳ ಓದಿಗೆ ತೊಂದರೆಯಾಗಿದೆ.ಇದೇ ಸ್ಥಿತಿ ಮುಂದುವರಿದರೆ ಮಕ್ಕಳಭವಿಷ್ಯಕ್ಕೆ ತೊಂದರೆಯಾಗುವ ಅಪಾಯವಿದೆಎಂದುಶಿಕ್ಷಣ ವ್ಯವಸ್ಥೆಯ ಲೋಪದೋಷಗಳನ್ನುಅನಾವರಣ ಮಾಡಿದರು.

ಸಂಪೂರ್ಣ ಶಿಕ್ಷಣ ವ್ಯವಸ್ಥೆಗೆ ಅಮೂಲಾಗ್ರ ಬದಲಾವಣೆ ತರಬೇಕಿದೆ. ಶಾಲೆಯಿಂದ ಹೊರಹೋಗಿರುವ ಮಕ್ಕಳನ್ನು ಗುರುತಿಸಿ, ಅವರನ್ನು ಪುನಃ ಶಾಲೆಗೆ ಕರೆತರುವ ಪ್ರಯತ್ನ ಮಾಡಬೇಕಿದೆ.ಬಿಪಿಎಲ್ ಕಾರ್ಡ್ ರದ್ದಾದಲ್ಲಿ, ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಬಹುದು ಎಂದುಸಲಹೆ ನೀಡಿದರು.

ಪರೀಕ್ಷಾ ಪದ್ಧತಿಯಲ್ಲೂಬದಲಾವಣೆ ತರಬೇಕಿದೆ. ಪರೀಕ್ಷೆ ನಡೆಯುವ ವೇಳೆಹಲವುಸುಧಾರಣಾ ಕ್ರಮ ಕೈಗೊಳ್ಳಬೇಕು. ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಬಗ್ಗೆಯೂ ಯುವ ಸಂಸತ್ ನಲ್ಲಿಚರ್ಚೆ ನಡೆಸಿದರು.

ಜಿಲ್ಲೆಯ ಎಲ್ಲಾ ತಾಲ್ಲೂಕಿನ 67 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಯುವ ಸಂಸತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿಸಿಇಒ ವೈಶಾಲಿ, ಯುವ ಸಂಸತ್ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ಯಾವ ಬಗೆಯಲ್ಲಿ ಕಾರ್ಯನಿರ್ವಹಿಸಸುತ್ತದೆ ಎಂದು ಅರಿತುಕೊಳ್ಳಬೇಕು. ಚಿಂತನಾಶೀಲತೆ, ಹೊಸ ಆಲೋಚನೆಗೆ ಯುವ ಸಂಸತ್ ವೇದಿಕೆಯಾಗುತ್ತದೆ. ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಇದು ಭದ್ರ ಬುನಾದಿಯಾಗುತ್ತದೆ ಎಂದರು.

ಜಿಲ್ಲಾ ಪಂಚಾಯಿತಿಅಧ್ಯಕ್ಷೆ ಜ್ಯೋತಿ ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT