ಮಾದರಿ ಕ್ಷೇತ್ರವಾಗಿ ರೂಪಿಸುವೆ: ರಾಘವೇಂದ್ರ

ಭಾನುವಾರ, ಜೂನ್ 16, 2019
28 °C

ಮಾದರಿ ಕ್ಷೇತ್ರವಾಗಿ ರೂಪಿಸುವೆ: ರಾಘವೇಂದ್ರ

Published:
Updated:
Prajavani

ಶಿವಮೊಗ್ಗ: ಲೋಕಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ರೂಪಿಸಲು ಸರ್ವ ಪ್ರಯತ್ನ ಮಾಡಲಾಗುವುದು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದು ವಿಜೇತ ಅಭ್ಯರ್ಥಿ ಬಿಜೆಪಿಯ ಬಿ.ವೈ.ರಾಘವೇಂದ್ರ ಭರವಸೆ ನೀಡಿದರು.

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಪ್ರಚಾರದ ಸಮಯದಲ್ಲಿ ಬಿಸಿಲನ್ನೂ ಲೆಕ್ಕಿಸದೆ ಭಾರಿ ಸಂಖ್ಯೆಯ ಜನರೂ ಬಂದಿದ್ದರು. ಅಮಿತ್‌ ಶಾ, ನಿರ್ಮಲ ಸೀತಾರಾಮನ್ ಕ್ಷೇತ್ರಕ್ಕೆ ಭೇಟಿ ನೀಡಿ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿದ್ದರು. ಯಡಿಯೂರಪ್ಪ ಅವರು ಸೇರಿ ಪಕ್ಷದ ಎಲ್ಲ ಶಾಸಕರು, ಮುಖಂಡರು ಶ್ರಮಿಸಿದ್ದರು. ಕಾರ್ಯಕರ್ತರು ಪ್ರತಿ ಬೂತ್‌ಮಟ್ಟಕ್ಕೂ ತೆರಳಿ ಪಕ್ಷದ ಧ್ಯೇಯ, ಕಾರ್ಯಕರ್ತರ ಸಾಧನೆ ಜನರಿಗೆ ತಲುಪಿಸಿದ್ದರು. ನಿರೀಕ್ಷೆಗೂ ಮೀರಿ ಜನರು ಗೆಲ್ಲಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಐದು ವರ್ಷ ನಡೆಸಿದ ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಆಡಳಿತ ಜನರ ಮನ್ನಣೆ ಗಳಿಸಿತ್ತು. ಮೋದಿ ಅವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕು ಎಂಬ ಅಭಿಲಾಷೆ ಇಟ್ಟುಕೊಂಡು ಜನರು ಭಾರಿ ಮತಗಳ ಅಂತರಿದಂದ ಗೆಲ್ಲಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !