ಮೇಕೆದಾಟು ಯೋಜನೆ ವೆಚ್ಚ 9 ಸಾವಿರ ಕೋಟಿಗೆ ಏರಿಕೆ: ಸಚಿವ ಡಿ.ಕೆ. ಶಿವಕುಮಾರ್

7

ಮೇಕೆದಾಟು ಯೋಜನೆ ವೆಚ್ಚ 9 ಸಾವಿರ ಕೋಟಿಗೆ ಏರಿಕೆ: ಸಚಿವ ಡಿ.ಕೆ. ಶಿವಕುಮಾರ್

Published:
Updated:

ರಾಮನಗರ: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ₹9 ಸಾವಿರ ಕೋಟಿ ವೆಚ್ಚದ ಪರಿಷ್ಕೃತ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಲ್ಲಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ‘ಈ ಹಿಂದೆ ₹5,900 ಕೋಟಿ ವೆಚ್ಚದ ಯೋಜನೆ ಸಿದ್ಧವಾಗಿತ್ತು. ಪರಿಷ್ಕೃತ ವರದಿಯಲ್ಲಿ ಅದರ ವೆಚ್ಚ ಹೆಚ್ಚಾಗಿದೆ. ಯೋಜನೆ ಕಾರ್ಯಾರಂಭಕ್ಕೆ ಸರ್ಕಾರ ಬದ್ಧವಾಗಿದೆ’ ಎಂದರು.

ಎರಡು ಕಣ್ಣು: ‘ಶಿವಕುಮಾರ ಶ್ರೀಗಳ ಹುಟ್ಟೂರಾದ ಮಾಗಡಿ ತಾಲ್ಲೂಕಿನ ವೀರಾಪುರ ಹಾಗೂ ಬಾಲಗಂಗಾಧರನಾಥ ಶ್ರೀಗಳ ಹುಟ್ಟೂರು ರಾಮನಗರ ತಾಲ್ಲೂಕಿನ ಬಾನಂದೂರು ನನ್ನ ಎರಡು ಕಣ್ಣುಗಳಿದ್ದಂತೆ. ಈ ಗ್ರಾಮಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲಾಗುವುದು. ಅಲ್ಲಿ ಸಣ್ಣಪುಟ್ಟ ಅಭಿವೃದ್ಧಿ ಕಾರ್ಯಗಳು ಈಗಾಗಲೇ ನಡೆದಿದ್ದು, ಜನಪ್ರತಿನಿಧಿಗಳ ನೇತೃತ್ವದಲ್ಲಿ ಮತ್ತೊಮ್ಮೆ ಯೋಜನೆ ರೂಪಿಸಲಾಗುವುದು’ ಎಂದರು.

‘ಶಾಸಕ ಆನಂದ್‌ ಸಿಂಗ್‌ ಗುಣಮುಖರಾಗುತ್ತಿದ್ದಾರೆ. ಅವರ ಮೇಲೆ ಹಲ್ಲೆ ನಡೆದಿದ್ದು ವಿಷಾದಕರ. ಆರೋಪಿ ಶಾಸಕ ಗಣೇಶ್ ಬಂಧನಕ್ಕೆ ಸರ್ಕಾರವು ಕ್ರಮ ಕೈಗೊಳ್ಳಲಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !