ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಠೇವಣಿ ಮಾಹಿತಿ ಸಲ್ಲಿಸಲು ಮನವಿ

Last Updated 9 ನವೆಂಬರ್ 2018, 14:30 IST
ಅಕ್ಷರ ಗಾತ್ರ

ಚನ್ನಪಟ್ಟಣ: ಗ್ರೀನ್ಸ್ ಬಡ್ಸ್ ಆಗ್ರೊ ಕಂಪನಿ ಲಿಮಿಟೆಡ್‌ನಲ್ಲಿ ಹಣ ಹೂಡಿಕೆ ಮಾಡಿರುವ ಠೇವಣಿದಾರರು ಹಣ ವಾಪಸ್ ಪಡೆಯಲು ಮೈಸೂರು ಉಪ ವಿಭಾಗಾಧಿಕಾರಿಗೆ ಠೇವಣಿ ದಾಖಲಾತಿ ಸಲ್ಲಿಸುವಂತೆ ಗ್ರೀನ್ ಬಡ್ಸ್ ಕಾರ್ಯಕರ್ತರು ಹಾಗೂ ಠೇವಣಿದಾರರ ಹಿತರಕ್ಷಣಾ ಸಮಿತಿ ರಾಜ್ಯ ಘಟಕದ ಕಾರ್ಯದರ್ಶಿ ಎ.ನಾಗರಾಜು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಂ.ಎಸ್.ಬಸವರಾಜು ಮನವಿ ಮಾಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಕಂಪನಿ ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ಠೇವಣಿ ಪಡೆದು ವಾಪಸ್‌ ನೀಡದೆ ಸತಾಯಿಸುತ್ತಿದೆ. ಇದರ ವಿರುದ್ಧ ಹಿತರಕ್ಷಣಾ ಸಮಿತಿ ಹೋರಾಟ ಮಾಡುತ್ತಲೇ ಬಂದಿದೆ. ಮೊಕದ್ದಮೆಯೂ ದಾಖಲಾಗಿದೆ. ಈ ಹೋರಾಟದ ಫಲವಾಗಿ ಪ್ರಕರಣವನ್ನು ಸಿಒಡಿಗೆ ವಹಿಸಲಾಗಿತ್ತು. ಇದರ ತನಿಖೆ ನಡೆದು ಕಂಪನಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ಹೊರಬಿದ್ದಿದೆ’ ಎಂದು ಅವರು ತಿಳಿಸಿದ್ದಾರೆ.

ಠೇವಣಿದಾರರು 87229 65424 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT