ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ನಿಲ್ದಾಣದಲ್ಲಿ ರೋಬೊ ಅಳವಡಿಕೆ

Last Updated 7 ಜೂನ್ 2022, 20:22 IST
ಅಕ್ಷರ ಗಾತ್ರ

ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 10 ರೋಬೊಗಳನ್ನು ಅಳವಡಿಸಲಾಗಿದೆ.

ಪ್ರಯಾಣಿಕರ ಮಾರ್ಗದರ್ಶನಕ್ಕೆ ಪ್ರಾಯೋಗಿಕವಾಗಿ ಈ ರೋಬೊಗಳನ್ನು ಅಳವಡಿಸಲಾಗಿದೆ. ಪ್ರಯಾಣಿಕರ ಪ್ರತಿಕ್ರಿಯೆ ಗಮನಿಸಿ ಮತ್ತಷ್ಟು ರೋಬೊಗಳನ್ನು ಅಳವಡಿಸಲಾಗುವುದು. ಜೊತೆಗೆ ಕಾರ್ಯವಿಧಾನಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಬಿಐಎಎಲ್‌ನ ಸಿಇಒ ಜಯರಾಜ್‌ ಷಣ್ಮುಗಂ ಮಾತನಾಡಿ, ‘ಪ್ರಯಾಣಿಕರ ಅಗತ್ಯತೆಗಳನ್ನು ಪೂರೈಸಲು ಹೊಸತನ ಅಳವಡಿಸಿಕೊಳ್ಳಲಾಗಿದೆ. ಪ್ರಯಾಣಿಕರಿಗೆ ಯಾವುದೇ ತಡೆ ಉಂಟಾಗಬಾರದು. ಈ ಸ್ಮಾರ್ಟ್ ರೋಬೊಗಳು ನಿಲ್ದಾಣಕ್ಕೆ ಇತ್ತೀಚಿನ ಸೇರ್ಪಡೆಯಾಗಿದ್ದು, ಗ್ರಾಹಕರಿಗೆ ಹೊಸ ತಂತ್ರಜ್ಞಾನದ ಮತ್ತಷ್ಟು ಸೇವೆ ಒದಗಿಸಿದಂತಾಗಿದೆ’ ಎಂದು ತಿಳಿಸಿದರು.

‘ಆರ್ಟಿಲಿಜೆಂಟ್‌’ ಸಂಸ್ಥೆಯ ಸಿಇಒ ರೂಪೇಶ್ ಅವರು, ‘ಬೆಂಗಳೂರು ವಿಮಾನ ನಿಲ್ದಾಣದ ಸಹಯೋಗ ಹೊಂದಲು ನಾವು ಹೆಮ್ಮೆ ಪಡುತ್ತೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT