ಶುಕ್ರವಾರ, ಫೆಬ್ರವರಿ 28, 2020
19 °C

ರೌಡಿ ಶೀಟರ್ ಮಾರ್ಕೆಟ್ ಲೋಕಿ ಮೇಲೆ ಗುಂಡಿನ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಸಮೀಪದ ಅಬ್ಬಲಗೆರೆ ಬಳಿ ರೌಡಿ ಶೀಟರ್ ಮಾರ್ಕೆಟ್ ಲೋಕಿ ಮೇಲೆ ಪೊಲೀಸರು ಬುಧವಾರ ಗುಂಡಿನ ದಾಳಿ ನಡೆಸಿದ್ದು,‌ ಲೋಕಿ ಎಡ ತೊಡೆಗೆ ಗಾಯವಾಗಿದೆ.

ಲೋಕಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರ್ಕೆಟ್ ಗಿರಿಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಲೋಕಿ ಅಲಿಯಾಸ್ ಮಾರ್ಕೆಟ್ ಲೋಕೇಶ್‌, ಕೊಲೆ ಬಳಿಕ ತಲೆ ಮರಿಸಿಕೊಂಡಿದ್ದ. ಪೊಲೀಸರು ತಮಿಳುನಾಡಿನಲ್ಲಿ ಆತನನ್ನು ಬಂಧಿಸಿ ಮಂಗಳವಾರ ಶಿವಮೊಗ್ಗಕ್ಕೆ ಕರೆತಂದಿದ್ದರು. ಮಹಜರ್‌ಗಾಗಿ ಅಬ್ಬಲಗೆರೆಗೆ ಕರೆದುಕೊಂಡು ಹೋಗಿದ್ದ ವೇಳೆ ಲೋಕಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಆಗ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಈ ವೇಳೆ ಪೊಲೀಸ್ ಕಾನ್‌ಸ್ಟೆಬಲ್ ಕಿರಣ್ ಅವರಿಗೂ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮಾರ್ಕೆಟ್ ಗಿರಿ ಹತ್ಯೆ: ರೌಡಿ ಶೀಟರ್ ಮಾರ್ಕೆಟ್ ಗಿರಿಯನ್ನು 2018ರ ಸೆಪ್ಟಂಬರ್‌ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಜ್ಯುವೆಲ್ ರಾಕ್ ಹೋಟೆಲ್ ಬಳಿಯ ಸೂರ್ಯ ಕಂಫರ್ಟ್‌ ಬಳಿ ಗಿರಿ (45) ಕಾರಿನಲ್ಲಿ ತೆರಳುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳು ಹಲ್ಲೆ ನಡೆಸಿದರು. ಕುಸಿದುಬಿದ್ದ ಆತ ಕೊನೆಯುಸಿರೆಳೆದಿದ್ದ.

ಟೈಲ್ಸ್ ನಾಗನ ಕೊಲೆ ಆರೋಪಿಗಳ ಬಂಧನ
ಶಿವಮೊಗ್ಗ: ಫೆ.9 ರಂದು ರಾತ್ರಿ ಬರ್ಬರವಾಗಿ ಹತ್ಯೆಗೊಳಗಾಗಿದ್ದ ಟೈಲ್ಸ್ ನಾಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋ‍ಪಿಗಳನ್ನು ಬುಧವಾರ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಭದ್ರಾವತಿಯ ಜೇಡಿಕಟ್ಟೆಯ ಜಿ.ರಾಘವೇಂದ್ರ, ರಾಘವೇಂದ್ರ, ಚಿಕ್ಕಲ್‌ನ ನಿವಾಸಿ ಚಂದ್ರಶೇಖರ್ ಬಂಧಿತ ಆರೋಪಿಗಳು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು