ಏಕತೆ ಮೂಡಿಸುವ ಮಹನೀಯರ ಜಯಂತಿಗಳು: ಹೆಚ್ಚುವರಿ ಜಿಲ್ಲಾಧಿಕಾರಿ ಜೆ.ಅನುರಾಧ ಅಭಿಮತ

7
ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮ

ಏಕತೆ ಮೂಡಿಸುವ ಮಹನೀಯರ ಜಯಂತಿಗಳು: ಹೆಚ್ಚುವರಿ ಜಿಲ್ಲಾಧಿಕಾರಿ ಜೆ.ಅನುರಾಧ ಅಭಿಮತ

Published:
Updated:
Prajavani

ಶಿವಮೊಗ್ಗ: ಮಹನೀಯರ ಜಯಂತಿ ಕಾರ್ಯಕ್ರಮಗಳು ಜನರಲ್ಲಿ ಏಕತೆ ಮೂಡಿಸುತ್ತಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಜೆ.ಅನುರಾಧ ಅಭಿಪ್ರಾಯಪಟ್ಟರು.

ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳವಾರ ಆಯೋಜಿಸಿದ್ದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ, ಸಂಘಟನೆಗಳಿಂದ ಮಾತ್ರ ಸಮಾಜದ ಬೆಳವಣಿಗೆ ಸಾಧ್ಯ. ಹಾಗಾಗಿ, ಎಲ್ಲಾ ಜನಾಂಗದವರೂ ಶಿಕ್ಷಣಕ್ಕೆ ಆಧ್ಯತೆ ನೀಡಬೇಕು. ಸವಿತ ಸಮಾಜದ ಮುಖಂಡರು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು. ಭವ್ಯ ಸಮಾಜದ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಸಲಹೆ ನೀಡಿದರು.

ಕಸ್ತೂರಬಾ ಕಾಲೇಜಿನ ಉಪನ್ಯಾಸಕ ಎಸ್.ಆರ್. ವೆಂಕಟೇಶ್ ಮಾತನಾಡಿ, ಸವಿತಾ ಸಮಾಜ ಎಲ್ಲಾ ವರ್ಗದವರನ್ನೂ ಸಮಾನವಾಗಿ ಕಾಣುವ ಮನಸ್ಸುಳ್ಳವರು. ಸಮಾನತೆಗೆ ಮೊದಲ ಆದ್ಯತೆ ನೀಡುವಜನರು ಎಂದು ಶ್ಲಾಘಿಸಿದರು.

ಈ ಸಮಾಜದಲ್ಲಿ ಅತಿ ಹೆಚ್ಚಿನ ಜ್ಞಾನಿಗಳಿದ್ದಾರೆ. ಆಯುರ್ವೇದ, ಸೂಲಗಿತ್ತಿ, ಕಾರ್ಯಗಳಲ್ಲಿ ತೊಡಗಿಸಿ ಕೊಂಡಿದ್ದಾರೆ. ಇಂದಿನ ದಿನಗಳಲ್ಲಿ ಆಯುರ್ವೇದ ಮೂಲೆಗುಂಪಾಗುತ್ತಿದೆ. ಇದು ಬೇಸರದ ಸಂಗತಿ ಎಂದರು.

ಜಿಲ್ಲಾ ಸವಿತ ಸಮಾಜದ ಅಧ್ಯಕ್ಷ ಕೆ.ಮೋಹನ್ ಮಾತನಾಡಿ, ಸಮಾಜದ ಜನರಲ್ಲಿ ಶಿಸ್ತು ಮತ್ತು ಶಿಕ್ಷಣದ ಕೊರತೆ ಇದೆ. ಹಾಗಾಗಿಯೇ ಇತರೆ ವರ್ಗಗಳಿಂದ ತುಳಿತಕ್ಕೆ ಒಳಗಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಯಾವುದೇ ವ್ಯಕ್ತಿ ತಮ್ಮ ಸಮಾಜ ಎಂದು ಧೈರ್ಯವಾಗಿ ಹೇಳಿಕೊಳ್ಳಬೇಕು. ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಬೆಳವಣಿಗೆ ಸಾಧಿಸಬೇಕು. ಆಗ ಮಾತ್ರ ತುಳಿಯುವವರನ್ನು ಎದುರಿಸಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಮಯದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ವೆಂ.ನಾಯಕ್ ಹಾಗೂ ಕನರ್ಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಪಿ. ಶೇಷಾದ್ರಿ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !