ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಗಳ ಮೇಲೆ ಲೈಂಗಿಕ ದೌರ್ಜನ್ಯ: ತಂದೆ ಬಂಧನ

Last Updated 25 ಅಕ್ಟೋಬರ್ 2019, 6:50 IST
ಅಕ್ಷರ ಗಾತ್ರ

ಹೊಳೆಹೊನ್ನೂರು: ಸಮೀಪದ ಗ್ರಾಮವೊಂದರಲ್ಲಿ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ತಂದೆಯನ್ನು ಪೋಕ್ಸೊ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.

ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ವ್ಯಕ್ತಿ ಆರನೇ ತರಗತಿ ಓದುತ್ತಿರುವ ಮಗಳನ್ನು ಬೆದರಿಸಿ, ಒಂದು ತಿಂಗಳಿಂದ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎಂದು ತಿಳಿದುಬಂದಿದೆ.

ಲೈಂಗಿಕ ದೌರ್ಜನ್ಯ ಯಾರು ಎಸಗುತ್ತಿದ್ದಾರೆ ಎಂಬುದನ್ನು ಹೇಳಲು ಮಗಳು ಹೆದರುತ್ತಿರುವುದನ್ನು ಗಮನಿಸಿದ ತಾಯಿ, ಸಂಬಂಧಿಕರಿಂದ ಮಗಳನ್ನು ವಿಚಾರಿಸಿ ಮಾಹಿತಿ ಕಲೆಹಾಕಿದ್ದಾರೆ. ಬಳಕ ಹೊಳೆಹೊನ್ನೂರು ಪೊಲೀಸ್ ಠಾಣೆಗೆ ಎರಡು ದಿನಗಳ ಹಿಂದೆ ಪತಿಯ ವಿರುದ್ಧ ದೂರು ನೀಡಿದ್ದರು.

ಜಿಲ್ಲಾ ಮಕ್ಕಳ ಸಮಿತಿ ಮತ್ತು ಮಕ್ಕಳ ಕಲ್ಯಾಣ ಸಮಿತಿ ಪ್ರಕರಣವನ್ನು ಪರಿಶೀಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT